Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರಿಗೆ ಮಾನವೀಯ ನೆಲಗಟ್ಟಿನಲ್ಲಿ ಚಿಂತನೆ.!

ಅತಿಥಿ ಉಪನ್ಯಾಸಕರಿಗೆ ಮಾನವೀಯ ನೆಲಗಟ್ಟಿನಲ್ಲಿ ಚಿಂತನೆ.!

ಬೆಂಗಳೂರು.06.ಸೆಪ್ಟೆಂಬರ್.25:ಅತಿಥಿ ಉಪನ್ಯಾಸಕರ ನೇಮಕ ವಿಚಾರಕ್ಕೆ ಸಂಬಂಧಿ ಸಿದಂತೆ ಹೈಕೋರ್ಟ್ ಸೋಮವಾರ ತೀರ್ಪು ನೀಡುವ ಸಾಧ್ಯತೆ ಇದೆ. ನಾವು ಕೇವಲ ಕಾನೂನಿನ ಚೌಕಟ್ಟಿನಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ. ಆದರೆ, ಮಾನವೀಯ ನೆಲಗಟ್ಟಿನಲ್ಲೂ ಆಲೋಚಿಸಬೇಕಾದ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು.

ಉಪನ್ಯಾಸಕರಿಗೆ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಮಾತನಾಡಿದ ಅವರು, *2 ಸಾವಿರ ಬೋಧಕರ ನೇಮಕ ಪ್ರಕ್ರಿಯೆ ಆರಂಭಿಸಿದ್ದೇವೆ. ಒಳಮೀಸಲು ಸಮಸ್ಯೆ ಬಗೆಹರಿದಿರುವುದರಿಂದ ನೇಮಕಾತಿ ಪ್ರಕ್ರಿಯೆಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು. 310 ಪ್ರಾಂಶುಪಾಲರ ನೇಮಕಾತಿ ಪ್ರಕ್ರಿಯೆಯಲ್ಲಿನ ಕಾನೂನು ತೊಡಕುಗಳನ್ನು ಪರಿಹರಿಸುತ್ತಿದ್ದು, ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲಾಗುವುದು. 6 ಸಾವಿರ ಉಪನ್ಯಾಸಕರಿಗೆ ಪದೋನ್ನತಿ ನೀಡಲಾಗಿದೆ.

ತಾಂತ್ರಿಕ ಶಿಕ್ಷಣದಲ್ಲಿ ವೃಂದ ಮತ್ತು ನೇಮಕಾತಿ ನಿಯಮ ರೂಪಿಸಲಾಗಿದೆ,” ಎಂದರು.

ವಿದ್ಯಾರ್ಥಿನಿಯರಿಗೆ 30 ಸಾವಿರ ವಿದ್ಯಾರ್ಥಿ ವೇತನ: “ಕಾಲೇಜು ವಿದ್ಯಾರ್ಥಿಗಳಲ್ಲಿ ಕೌಶಲ್ಯ ಅಭಿವೃದ್ದಿಗಾಗಿ ಕ್ರಮ ಕೈಗೊಂಡಿದ್ದು, ಪ್ರಸಕ್ತ ವರ್ಷದಲ್ಲಿ 2,500 ಮಂದಿ ಪ್ರವೇಶ ಪಡೆದಿದ್ದಾರೆ. ಇವರಿಗೆ ಮಾಸಿಕ 8,000 ರೂ. ಶಿಷ್ಯವೇತನ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರು ಆರ್ಥಿಕ ಸಮಸ್ಯೆಯಿಂದಾಗಿ ಉನ್ನತ ಶಿಕ್ಷಣ ದಿಂದ ವಂಚಿತರಾಗುತ್ತಿದ್ದಾರೆ. ಇದಕ್ಕಾಗಿ ಅಜೀಂ ಪ್ರೇಮ್‌ಜೀ ಪ್ರತಿಷ್ಠಾನದೊಂದಿಗೆ 10ನೇ ತರಗತಿ ಮತ್ತು ಪಿಯುಸಿಯನ್ನು ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಪೂರೈಸಿ ವೈದ್ಯಕೀಯ, ಎಂಜಿನಿಯರಿಂಗ್, ಪದವಿ, ಡಿಪ್ಲೊಮಾಕ್ಕೆ ಪ್ರವೇಶ ಪಡೆದಿರುವ 36 ಸಾವಿರ ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲು ತೀರ್ಮಾನಿಸಲಾಗಿದೆ. ಇದಕ್ಕೆ ಸೆ. 19ರಂದು ಸಿಎಂ ಚಾಲನೆ ನೀಡಲಿದ್ದಾರೆ,” ಎಂದು ಹೇಳಿದರು.

Author

ಪ್ರಮುಖ ಸುದ್ದಿ

Stock market

Astrology