Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ಇಲ್ಲ ಪಾಠ ಪ್ರವಚನೋ ಇಲ್ಲ.

ಅತಿಥಿ ಉಪನ್ಯಾಸಕರ ಇಲ್ಲ ಪಾಠ ಪ್ರವಚನೋ ಇಲ್ಲ.

ಚೆನ್ನಗಿರಿ.15.ಆಗಸ್ಟ್.25:- ರಾಜ್ಯಾದ್ಯಂತ 430 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 11000 ಸಾವಿರ ಅತಿಥಿ ಉಪನ್ಯಾಸಕರನ್ನು, ಆಗಸ್ಟ್ 2ರಂದು ಏಕಕಾಲಕ್ಕೆ ಕೆಲಸದಿಂದ ವಜಾಗೊಳಿಸಲಾಗಿದೆ. ಕಳೆದ ಒಂದು ತಿಂಗಳಿನಿಂದ ಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಪಾಠಗಳು ಸರಿಯಾಗಿ ನಡೆಯುತ್ತಿಲ್ಲ. ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಲ್ಲಿನ ಅರ್ಹತೆ, ಅನರ್ಹತೆಯ ಪ್ರಶ್ನೆಯು ನ್ಯಾಯಾಲಯದ ಕಟಕಟೆಯಲ್ಲಿದೆ. 10-15 ವರ್ಷಗಳಿಂದ ಕಾರ್ಯ ನಿರ್ವಹಿಸುವಾಗ ಇಲ್ಲದ ಈ ಪ್ರಶ್ನೆ ಈಗೇಕೆ?

ಪ್ರಕರಣದ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿದ್ದು, ಉನ್ನತ ಶಿಕ್ಷಣ ಇಲಾಖೆಯು ನ್ಯಾಯಾಲಯದ ಆದೇಶವನ್ನು ಎದುರು ನೋಡುತ್ತಿದೆ. ಈ ಮಧ್ಯೆ ಅತಿಥಿ ಉಪನ್ಯಾಸಕರಿಗೆ ಕೆಲಸವೂ ಇಲ್ಲ, ಸಂಬಳವೂ ಇಲ್ಲದೆ ಬೇರೆ ಕೆಲಸ ನಿರ್ವಹಿಸಲಾಗದೆ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಉನ್ನತ ಶಿಕ್ಷಣ ಸಚಿವರು ಕಾನೂನು ತಜ್ಞರ ಸಲಹೆ ಪಡೆದು ಅತಿಥಿ ಉಪನ್ಯಾಸಕರ ನೇಮಕಕ್ಕೆ ತಕ್ಷಣ ಮುಂದಾಗಲಿ.

ಶಿವಕುಮಾ‌ರ್ ಯರಗಟ್ಟಿಹಳ್ಳಿ, ಚನ್ನಗಿರಿ

Author

ಪ್ರಮುಖ ಸುದ್ದಿ

Stock market

Astrology