Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಫರಂಗಿಪೇಟೆ ಮೌಲಾನ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜು ಇಲ್ಲಿಗೆ ಭೌತಶಾಸ್ತ್ರ ಹಾಗೂ ಆಂಗ್ಲ ಭಾಷಾ ವಿಜ್ಞಾನ ವಿಭಾಗಕ್ಕೆ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿ.ಇಡಿ ಪೂರ್ಣಗೊಳಿಸಿರಬೇಕು.

ಮಾಸಿಕ: 14,000 ಗೌರವಧನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9742972679 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology