Home » ಲೈವ್ ನ್ಯೂಸ್ » ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗೆ ಮನವಿ

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗೆ ಮನವಿ


ಬೀದರ.03..ಜೂನ್.26:- ಕಮಲನಗರ ರೈಲ್ವೆ ನಿಲ್ದಾಣದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಸುಮಾರು 35 ರಿಂದ 40 ವರ್ಷದ ಅಪರಿಚಿತ ಗಂಡಸನ್ನು ಚಿಕಿತ್ಸೆಗಾಗಿ ಬೀದರ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 30-05-2026 ರಂದು ಸಾಯಂಕಾಲ 5 ಗಂಟೆಗೆ ಮೃತಪಟ್ಟಿರುತ್ತಾನೆ. ಈವರೆಗೆ ಮೃತನ ವಾರಸುದಾರರು ಯಾರೆಂದು ಪತ್ತೆಯಾಗಿರುವುದಿಲ್ಲ.


ಈ ಕುರಿತು ಬೀದರ ಜಿಲ್ಲಾ ಸರಕಾರಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯಾಧಿಕಾರಿಗಳ ಮಾಹಿತಿ ಮೇರೆಗೆ ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ನಂ-09/2026, ಕಲಂ 194 ಬಿ.ಎನ್.ಎಸ್.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.


ಮೃತನ ವ್ಯಕ್ತಿ 5 ಅಡಿ 4 ಇಂಚ್ ಎತ್ತರ ಇದ್ದು, ತೆಳ್ಳನೆಯ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ, ಅಗಲವಾದ ಹಣೆ, ಸಣ್ಣ ಕಣ್ಣುಗಳು, ಉದ್ದನೆಯ ಮೂಗು, ಅಗಲವಾದ ಕಿವಿಗಳು, ತಲೆಯಲ್ಲಿ ಬಿಳಿ ಮಿಶ್ರಿತ ಕಪ್ಪು ಕೂದಲು, ಮುಖದ ಮೇಲೆ ಚಿಕ್ಕ ಮೀಸೆ ಮತ್ತು ಗಡ್ಡ ಇದ್ದು, ಮೈಮೇಲೆ ಬಿಳಿ ಬಣ್ಣದ ಫುಲ್ ತೋಳಿನ ಅಂಗಿ, ಚಾಕ್ಲೇಟ್ ಬಣ್ಣದ ಒಳಗಿನ ಟಿ-ಶರ್ಟ್, ಬೂದು ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ತಾಂಬಿ ಹೆಸರಿನ ಅಂಡರವೇರ್, ಬಿಳಿ ಬಣ್ಣದ ನೀಲಿ ಗೆರೆಗಳುಳ್ಳ ದಸ್ತಿ ಇರುತ್ತದೆ.


ಈ ಚಹರೆಯುಳ್ಳ ಅಪರಿಚಿತ ಮೃತನ ವಾರಸುದಾರರ ಬಗ್ಗೆ ಯಾವುದೇ ಸುಳಿವು ಅಥವಾ ಮಾಹಿತಿ ಸಿಕ್ಕಲ್ಲಿ ತಕ್ಷಣವೇ ಬೀದರ್ ರೈಲ್ವೆ ಪೊಲೀಸ್ ಉಪ ನಿರೀಕ್ಷಕರಿಗೆ ಮಾಹಿತಿ ನೀಡುವುದು ಅಥವಾ ದೂರವಾಣಿ ಸಂಖ್ಯೆ: 08482-226389, ಮೊಬೈಲ್ ಸಂಖ್ಯೆ: 9480802133, 7483095508, 7019384645 ಗಳಿಗೆ ಸಂಪರ್ಕಿಸುವAತೆ ಬೀದರ ರೈಲ್ವೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology