Home » ಲೈವ್ ನ್ಯೂಸ್ » ಅಲೆಮಾರಿಗಳ ಹೋರಾಟಕ್ಕೆ ಜಯ; ಧರಣಿ ಅಂತ್ಯ.!

ಅಲೆಮಾರಿಗಳ ಹೋರಾಟಕ್ಕೆ ಜಯ; ಧರಣಿ ಅಂತ್ಯ.!

ಬೀದರ್.29.ಜನವರಿ.26: ಔರಾದ ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ರಾಹುಲ್ ಖಂದಾರೆ ಅವರ ನೇತೃತ್ವದಲ್ಲಿ ಅಲೆಮಾರಿ ಜನಾಂಗಕ್ಕೆ ನಿವೇಶನ ಕಾಯ್ದಿರಿಸಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಜ.19ರಂದು ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಎರಡು ಎಕರೆ ಜಾಗ ಕೊಡಲೇಬೇಕೆಂದು ಪಟ್ಟು ಹಿಡಿದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ತಹಸೀಲ್ ಕಚೇರಿ ಮುಂಭಾಗ ಕಳೆದ 11 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಗುರುವಾರ ಸಾಯಂಕಾಲ ಹೋರಾಟವನ್ನು ಹಿಂಪಡೆದಿದ್ದಾರೆ.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಗುರುವಾರ ರಾತ್ರಿ 8.30 ಗಂಟೆ ಸುಮಾರಿಗೆ ಧರಣಿ ಸ್ಥಳಕ್ಕೆ ತೆರಳಿ ಅಧಿಕೃತವಾಗಿ ಎರಡು ಎಕರೆ ಜಾಗ ಮಂಜೂರು ಮಾಡಲಾಗಿದೆ. ಮುಂದಿನ ಆರು ತಿಂಗಳಲ್ಲಿ ಜಿ ಪ್ಲಸ್ -3 ಯೋಜನೆಯಡಿ ಮನೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿ, ಹಿಂಬರಹ ಪತ್ರ ನೀಡಿದ ಬಳಿಕ ಪ್ರತಿಭಟನಾ ನಿರತ ಅಲೆಮಾರಿ ಜನಾಂಗ ಶಾಂತಿಯುತವಾಗಿ ತಮ್ಮ ಹೋರಾಟವನ್ನು ಹಿಂಪಡೆದಿದ್ದಾರೆ.ಈ ಸಂದರ್ಭದಲ್ಲಿ ಬೀದರ್ ಸಹಾಯಕ ಆಯುಕ್ತ ಮುಹಮ್ಮದ್ ಶಕೀಲ್, ತಹಸೀಲ್ದಾರ್ ಮಹೇಶ್ ಪಾಟೀಲ್ ಸೇರಿದಂತೆ ಅಧಿಕಾರಿಗಳು ಸೇರಿದಂತೆ ಪ್ರತಿಭಟನೆ ನೇತೃತ್ವ ವಹಿಸಿದ ರಾಹುಲ್ ಖಂದಾರೆ, ಸುಭಾಷ್ ಲಾಧಾ, ಪ್ರವೀಣ ಕಾರಂಜೆ, ಸಂತೋಷ ಸಿಂಧೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Author

ಪ್ರಮುಖ ಸುದ್ದಿ

Stock market

Astrology