Home » ಲೈವ್ ನ್ಯೂಸ್ » ಆಧುನಿಕ ಕುರಿತು ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಾಯಿಸಿ ಮನವಿ

ಆಧುನಿಕ ಕುರಿತು  ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಾಯಿಸಿ ಮನವಿ

ಬೀದರ.22.ಜೂನ್.25:- ಜಿಲ್ಲೆಯ ರೈತ ಬಾಂಧವರಿಗಾಗಿ “ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ” ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಕೇಂದ್ರ ಗ್ರಂಥಾಲಯ  ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಜೂನ್.26 ರಿಂದ 27 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಪಶುಪಾಲನಾ ಮತ್ತು ಪಶುವೈದ್ಯಕೀಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತರು ಮುಂಚಿತವಾಗಿ ಹೆಸರು ನೋಂದಾಯಿಸಿಕೊಂಡು ಆಧಾರ ಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಹಾಜರಾಗಬಹುದಾಗಿದೆ. 50 ರೈತರಿಗೆ ತರಬೇತಿಗೆ ಅವಕಾಶವಿರುವುದರಿಂದ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9902561957 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology