Home » ಲೈವ್ ನ್ಯೂಸ್ » ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗೇ ಅರ್ಜಿ ಅಹ್ವಾನ

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗೇ ಅರ್ಜಿ ಅಹ್ವಾನ


ಬೀದರ,06.ಜುಲೈ.26,:- ಬೀದರ ಜಿಲ್ಲೆಯ ರೈತ ಬಾಂಧವರಲ್ಲಿ ಬೀದರ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಿoದ ಆಧುನಿಕ ಕೋಳಿ ಸಾಕಾಣಿಕೆ ತರಬೇತಿ 2026ರ ಜುಲೈ 9 ರಿಂದ 10ರ ವರೆಗೆ ಎರಡು ದಿನಗಳ ಬೀದರ ಜಿಲ್ಲಾ ಕೇಂದ್ರ ಗ್ರಂಥಾಲಯ ಹಿಂಭಾಗದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ತರಬೇತಿ ಕೇಂದ್ರ ಪಶು ವೈದ್ಯಕೀಯ ಮತ್ತು ಪಶು ಪಾಲನಾ ಮುಖ್ಯ ಪಶು ವ್ಯದ್ಯಾಧಿಕಾರಿ ಡಾ.ವಿಕ್ರಂ.ಸಿ ತಿಳಿಸಿದ್ದಾರೆ.

     ಅಂದು ಬೀದರ ಜಿಲ್ಲೆಯ ರೈತರು ತರಬೇತಿಗೆ ಹಾಜರಾಗುವ ಸಮಯದಲ್ಲಿ ಆಧಾರ ಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಎರಡು ಫೋಟೋ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಆಸಕ್ತರು ಮುಂಚಿತವಾಗಿ ವಾಟ್ಸ್ಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯೊoದಿಗೆ ನೋಂದಾಯಿಸಲು ತಿಳಿಸಿದೆ.

40 ರೈತರಿಗೆ ತರಬೇತಿಗೆ ಅವಕಾಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಈಗಾಗಲೇ ನಮ್ಮ ಕೇಂದ್ರದಿoದ ತರಬೇತಿ ಪಡೆದವರಿಗೆ ಅವಕಾಶವಿರುವುದಿಲ್ಲ. ಜಾನುವಾರು ಮಾಲೀಕರು ರೈತ ಬಾಂಧವರು ಸದುಪಯೋಗಪಡೆಯಬೇಕು.

ಹೆಚ್ಚಿನ ಮಾಹಿತಿಗಾಗಿ ಬೀದರ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಜಿಲ್ಲಾ ಕೇಂದ್ರ ಗ್ರಂಥಾಲಯ ಹಿಂಭಾಗ, ದೂ.ಸಂ.9448222690ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology