Home » ಲೈವ್ ನ್ಯೂಸ್ » ಇಂದು ಪೌರಾಡಳಿತ ಸಚಿವ ರಹೀಂ ಖಾನ್ ಅವರ ಬೀದರ ಜಿಲ್ಲಾ ಪ್ರವಾಸ

ಇಂದು ಪೌರಾಡಳಿತ ಸಚಿವ ರಹೀಂ ಖಾನ್ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ.27.ಮೇ.25:- ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಮೇ.27 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.


ಅವರು ಮೇ.27 ರಂದು ಬೆಳಿಗ್ಗೆ 10.30 ಗಂಟೆಗೆ ಬೀದರ ಜಿಲ್ಲಾ ಕಾಂಗ್ರೆಸ್ ಕಛೇರಿ ಭೇಟಿ ನೀಡುವರು. ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲೆಯ ಇಂದೀರಾ ಕ್ಯಾಂಟೀನ್/ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 11.30ಕ್ಕೆ ಬೀದರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬAಧಿಸಿದoತೆ ಜಿಲ್ಲಾ ಆಡಳಿತ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಜಿಲ್ಲೆಯಲ್ಲಿ ಅಮೃತ್ 2.0 ಯೋಜನೆಯಡಿ ಕೈಗೆತ್ತಿಕೊಂಡಿರುವ ಉದ್ಯಾನವನ ಹಾಗೂ ಕೆರೆಗಳ ಪರಿಶೀಲನೆ ನಡೆಸಲಿದ್ದಾರೆ.

ಸಂಜೆ 4 ಗಂಟೆಗೆ ಬೀದರ ಜಿಲ್ಲೆಯಲ್ಲಿ ನಿಗದಿಪಡಿಸಿದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology