Home » ಲೈವ್ ನ್ಯೂಸ್ » ಇಂದು ಪ್ರಜಾಪ್ರಭುತ್ವ ದಿನಾಚರಣೆ

ಇಂದು  ಪ್ರಜಾಪ್ರಭುತ್ವ ದಿನಾಚರಣೆ

ಬೀದರ.14.ಸೆಪ್ಟೆಂಬರ.25:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್.15 ರಂದು ಬೆಳಿಗ್ಗೆ 9 ಗಂಟೆಗೆ ಸರಕಾರಿ ನೌಕರರ ಸಮುದಾಯ ಭವನ ಬೀದರದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 7 ಗಂಟೆಗೆ ಜಿಲ್ಲಾ ನೆಹರು ಕ್ರೀಡಾಂಬಣ ಬೀದನಿಂದ ಸೈಕಲಿ ರ‍್ಯಾಲಿ ಪ್ರಾರಂಭಿಸಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಸರಕಾರಿ ನೌಕರರ ಭವನ ಪ್ರತಾಪನಗರ ವರೆಗೆ ಸೈಕಲ್ ರ‍್ಯಾಲಿ ನಡೆಯಲಿದೆ.

ಕಾರ್ಯಕ್ರಮ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಮ್ ಖಾನ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ, ಔರಾದ ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪಾ ಎನ್.ಪಾಟೀಲ ಹಾಗೂ ವಿಧಾನo ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ.ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರುಗಳು ಭಾಗವಹಿಸಲಿದ್ದಾರೆ. ಹಾಗೂ ಅತಿಥಿ ಉಪನ್ಯಾಸವನ್ನು ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ವಿಠಲದಾಸ್ ಪ್ಯಾಗೆ ಅವರು ನೀಡಲಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology