Home » ಲೈವ್ ನ್ಯೂಸ್ » ಎಣ್ಣೆ ಕಾಳು ಕೋಯ್ಲೋತರ ಘಟಕಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಎಣ್ಣೆ ಕಾಳು ಕೋಯ್ಲೋತರ ಘಟಕಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೀದರ,08.ಜುಲೈ 26:- ಕೃಷಿ ಇಲಾಖೆಯಿಂದ 2026-27ನೇ ಸಾಲಿನ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಎಣ್ಣೆಕಾಳು ಯೋಜನೆಯಡಿ ಕೋಯ್ಲೋತರ ಘಟಕಕ್ಕೆ ಮೂಲ ಸೌಕರ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕಿ ದೇವಿಕಾ ತಿಳಿಸಿದ್ದಾರೆ.

     ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು, ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲ ಆಗುವಂತೆ ಹಾಗೂ ಎಣ್ಣೆಕಾಳು ಬೆಳೆ ಉತ್ತೇಜಿಸಲು ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಎಣ್ಣೆ ಕಾಳು ಕೋಯ್ಲೋತರ ಘಟಕಗಳಿಗೆ ಅವಶ್ಯವಿರುವ ಯಂತ್ಯೋಪಕರಣ ಖರೀದಿಸಲು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು, ರೈತ ಉತ್ಪಾದಕ ಸಂಘಗಳು ವಿಸ್ತçತ ಯೋಜನಾ ವರದಿಯೊಂದಿಗೆ ಅರ್ಜಿಸಲ್ಲಿಸಬೇಕು. ಯೋಜನಾ ವರದಿಯ ಶೇ.33 ರಷ್ಟು ಅಥವಾ 9.99 ಲಕ್ಷ ಮೀರದಂತೆ ಸಹಾಯಧನ ಒದಗಿಸಲಾಗುವುದು. ಅರ್ಜಿಗಳನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶೀಲಿಸಿ ಅರ್ಹ ಫಲಾನುಭವಿಯನ್ನು ಕಾರ್ಯಕಾರಿ ಸಮಿತಿ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology