Home » ಲೈವ್ ನ್ಯೂಸ್ » ಕನ್ನಡ ಶಿಕ್ಷಣ ಯೋಜನೆ ತರಬೇತಿ, ನೋಂದಣಿಗೆ ಅರ್ಜಿ ಆಹ್ವಾನ

ಕನ್ನಡ ಶಿಕ್ಷಣ ಯೋಜನೆ ತರಬೇತಿ, ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು.29.ಡಿಸೆಂಬರ್.25: ಕನ್ನಡ ಬಾರದ ಸರ್ಕಾರಿ ನೌಕರರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡು ಸಂಸ್ಥೆಗಳು ಒಟ್ಟಾಗಿ ನವೆಂಬರ್ ೦೧, ೧೯೮೫ ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲಾ ಸರ್ಕಾರಿ ನೌಕರರಿಗೆ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ.

ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ, ಕೆಎಸ್‌ಆರ್‌ಟಿಸಿ, ವಿಶ್ವವಿದ್ಯಾಲಯ, ಶಾಲಾ-ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟಿಲ್oಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದು. ನೋಂದಣಿತರು ಶುಲ್ಕ ಕೊಡಬೇಕಿಲ್ಲ. ಕರ್ನಾಟಕದ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗ ಅವರ ಕಚೇರಿ ಗೈರುಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊoಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ ವಿನಾಯಿತಿಯಿದೆ.

ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ ೧೮ ರಿಂದ ೫೦ ವರ್ಷದೊಳಗಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ರೂ.೨೫೦ ಡಿಮ್ಯಾಂಡ್ ಡ್ರಾಪ್ಟು ಕಳುಹಿಸಿಕೊಡಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.

ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡೂ ಸಂಸ್ಥೆಗಳು ಒಟ್ಟಾಗಿ ನವೆಂಬರ್ 01, 1985 ರಿಂದ ಕರ್ನಾಟಕದಲ್ಲಿರುವ (Karnataka) ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ (Government officials) ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ (Kannada education) ಯೋಜನೆಯೊಂದನ್ನು ನಡೆಸುತ್ತಿದ್ದು, ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲ ನಗರಸಭೆ, ಕ.ವಿ.ಪ್ರ.ನಿ.ನಿ., ಕೆ.ಎಸ್.ಆರ್.ಟಿ.ಸಿ, ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದಾಗಿದೆ.

ಕರ್ನಾಟಕದ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗ ಅವರ ಕಚೇರಿ ಗೈರುಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊoಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿಯಿರುತ್ತದೆ.

ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದ್ದು, ಇವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ 18 ರಿಂದ 50 ವಯಸ್ಸಿನ ಒಳಗಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ ರೂ. 250/- ಡಿಮ್ಯಾಂಡ್ ಡ್ರಾಫ್ಟನ್ನು ಕಳುಹಿಸಿ ಕೊಡಬೇಕು. ನೋಂದಯಿತರಿಗೆ ಇಪ್ಪತ್ತು, ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಮೂವತ್ತೊಂಭತ್ತನೆಯ ತಂಡದ ತರಬೇತಿಯು ಜನವರಿ 2026 ರಿಂದ ಆರಂಭವಾಗುತ್ತಿದ್ದು, ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006,

ದೂ. ಸಂ. 0821-2345128 ಇವರಿಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸಿತ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಪ್ರಭಾರಿ ಅಧಿಕಾರಿಯವರಿಗೆ ಜನವರಿ 10, 2026 ಒಳಗೆ ತಲುಪಿಸಬೇಕು ಎಂದು ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯ ಪ್ರಭಾರಿ ಅಧಿಕಾರಿಗಳಾದ ಡಾ.ಪಿ.ಆರ್. ಧರ್ಮೇಶ್ ಫರ್ನಾಂಡಿಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology