ರಾಯಚೂರು.26.ಫೆಬ್ರವರಿ.26: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಜನರಿಗೆ ಒದಗಿಸುವ ಉದ್ದೇಶದಿಂದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಮಸ್ಕಿ ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯತ್, ಮಸ್ಕಿ ಟಿಎಮ್‌ಸಿ, ಹಟ್ಟಿ ಪಟ್ಟಣ ಪಂಚಾಯತ್, ಲಿಂಗಸುಗೂರು ಟಿಎಮ್‌ಸಿಯಲ್ಲಿ ತಲಾ 1 ಕೇಂದ್ರ ಹಾಗೂ ರಾಯಚೂರು ನಗರ ಪಾಲಿಕೆ 2 ಕೇಂದ್ರಗಳು ಸೇರಿದಂತೆ ಒಟ್ಟು 7 ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್‌ಲೈನ್‌ನಲ್ಲಿ: hಣಣಠಿs://ತಿತಿತಿ.ಞಚಿಡಿಟಿಚಿಣಚಿಞಚಿoಟಿe.gov.iಟಿ/Pubಟiಛಿ/ಈಡಿಚಿಟಿಛಿhiseeಖಿeಡಿms ನಲ್ಲಿ ಮಾಚ್ 2ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ?