Home » ಲೈವ್ ನ್ಯೂಸ್ » ಕಾಲೇಜು ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆಗೆ ಕೌನ್ಸೆಲಿಂಗ್: ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶೀಘ್ರ

ಕಾಲೇಜು ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆಗೆ ಕೌನ್ಸೆಲಿಂಗ್: ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶೀಘ್ರ

ಬೆಂಗಳೂರು: 2025 ನೇ ಸಾಲಿಗೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸಿಲಿಂಗ್‌ ನಡೆಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಬೋಧಕರ(ಪ್ರಾಧ್ಯಾಪಕರು, ಸಹ/ಸಹಾಯಕ ಪ್ರಾಧ್ಯಾಪಕರು, ಗ್ರಂಥಪಾಲಕರು ಮತ್ತು ಕ್ರೀಡಾ & ದೈಹಿಕ ಶಿಕ್ಷಣ ನಿರ್ದೇಶಕರು) 2025ನೇ ಸಾಲಿನ ವರ್ಗಾವಣೆಗಳಿಗೆ ಸಂಬಂಧಿಸಿದಂತೆ ಉಲ್ಲೇಖ(1)ರ ನಿಯಮಗಳಲ್ಲಿ ನೀಡಿರುವ ಸೂಚನೆಯಂತೆ ಕ್ರಮಕೈಗೊಳ್ಳುವ ಸಲುವಾಗಿ ಉಲ್ಲೇಖ(2)ರ ಪ್ರಕಟಣೆಯಲ್ಲಿ ವರ್ಗಾವಣೆ ಕೌನ್ಸಿಲಿಂಗ್‌ನ ತಾತ್ಕಾಲಿಕ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ.

ಅದರಂತೆ, ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆ ಮತ್ತು ವಿಶೇಷ ಪ್ರಕರಣಗಳ ತಾತ್ಕಾಲಿಕ ವರ್ಗಾವಣಾ ಆದ್ಯಾತಾ ಪಟ್ಟಿಯನ್ನು ದಿನಾಂಕ: 16-06-2025 ರಂದು ಪ್ರಕಟಿಸಲು ನಿಗದಿಪಡಿಸಿದ್ದು, ಪ್ರಸ್ತುತ ಗಂಭೀರ ಕಾಯಿಲೆಗಳ ಪ್ರಕರಣಗಳಡಿ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಬೋಧಕರ ವೈದ್ಯಕೀಯ ತಪಾಸಣಾ ವರದಿ ಸ್ವೀಕೃತವಾಗದ ಹಿನ್ನೆಲೆಯಲ್ಲಿ ತಾತ್ಕಾಲಿಕ ವರ್ಗಾವಣಾ ಆದ್ಯಾತಾ ಪಟ್ಟಿಯನ್ನು ಪ್ರಕಟಿಸಲಾಗಿರುವುದಿಲ್ಲ. ಆದ್ದರಿಂದ ಪರಿಷ್ಕೃತ ವರ್ಗಾವಣಾ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದೆಂದು ತಿಳಿಸಲಾಗಿದೆ.

Author

ಪ್ರಮುಖ ಸುದ್ದಿ

Stock market

Astrology