ಕೊಪ್ಪಳ.13.ಜೂನ್.26: 2026-27ನೇ ಶೈಕ್ಷಣಿಕ ಸಾಲಿಗೆ ಕುಷ್ಟಗಿ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ವರ್ಗದ (ಎಸ್‌ಟಿ) ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕುಷ್ಟಗಿ ತಾಲೂಕಿನ ಹನುಮನಾಳದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಕುಷ್ಟಗಿ ಪಟ್ಟಣದ ವಣಗೇರಾ-ಹನುಮಸಾಗರ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಹಾಗೂ ಅಮಿನಾಬಿ ಲೇಔಟ್‌ನಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ www.twd.kar.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಎಸ್‌ಎಸ್‌ಪಿ ಐಡಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆ, ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆ ಕಡ್ಡಾಯವಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಗಳು, ರೇಷನ್ ಕಾರ್ಡ್, ಹಿಂದಿನ ತರಗತಿಯ ಅಂಕಪಟ್ಟಿ, ಕಾಲೇಜು ದಾಖಲಾತಿ ಶುಲ್ಕದ ರಶೀದಿ ಹಾಗೂ ಎರಡು ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರಗಳನ್ನು ಶಾಲೆಯ ಮುಖ್ಯೋಪಾಧ್ಯಾಯರು ಅಥವಾ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಸಂಬಂಧಿತ ವಸತಿ ನಿಲಯ ಅಥವಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಕುಷ್ಟಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಕುಷ್ಟಗಿ: ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ?