Home » ಲೈವ್ ನ್ಯೂಸ್ » ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಧನಕ್ಕೆ ಪ್ರಸ್ತಾವನೆ ಆಹ್ವಾನ

ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಧನಕ್ಕೆ ಪ್ರಸ್ತಾವನೆ ಆಹ್ವಾನ

ಬೀದರ.18.ಜನವರಿ.26:- ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ನೇಕಾರರ ಪ್ಯಾಕೇಜ್ ಯೋಜನೆಯಡಿ ವಿಶೇಷ ಘಟಕ/ಗಿರಿಜನ ಉಪ ಯೋಜನೆಯಡಿ ಸಹಾಯಧನಕ್ಕೆ ಪ್ರಸ್ತಾವನೆ ಆಹ್ವಾನಿಸಲಾಗಿದೆ ಎಂದು  ಬೀದರ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತೀ ಸಣ್ಣ (ಎಸ್.ಎಮ್.ಇ.) ಘಟಕo ಸ್ಥಾಪನೆಗೆ  ಶೇ.75 ರಷ್ಟು ಬಂಡವಾಳ ಹೂಡಿಕೆ ಸಹಾಯಧನ ಯೋಜನೆಯಡಿ ಮಂಜೂರಾತಿಗಾಗಿ ಈಗಾಗಲೇ ಜಿಲ್ಲಾ ಮಟ್ಟದ ಏಕಗವಾಕ್ಷಿ ಒಪ್ಪಿಗೆ ಸಮಿತಿ ಸಭೆಯಲ್ಲಿ ಅನುಮೋದನೆ ಪಡೆದ ಹಾಗೂ ಬ್ಯಾಂಕ್/ಹಣಕಾಸು ಸಂಸ್ಥೆಗಳಿಂದ ಸಾಲ ಮಂಜೂರಾತಿ ಪಡೆದಿರುವಂತ ಉದ್ದೇಶಿತ ಘಟಕಗಳ ಫಲಾನುಭವಿಗಳು ಪೂರ್ಣ ದಾಖಲಾತಿಗಳೊಂದಿಗೆ ಪ್ರಸ್ತಾವನೆಗಳನ್ನು ದಿನಾಂಕ: 28-01-2026 ರೊಳಗಾಗಿ ಕಛೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರವರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ರೇಷ್ಮೆ ಇಲಾಖೆ ಕಛೇರಿ ಕಟ್ಟಡ, 2ನೇ ಮಹಡಿ, ಕೋಳಾರ(ಕೆ), ಬೀದರ್ ದೂರವಾಣಿ ಸಂಖ್ಯೆ: 9972205911 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology