Home » ಲೈವ್ ನ್ಯೂಸ್ » ಗ್ರಾಮ ಆಡಳಿತಾಧಿಕಾರಿ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಗ್ರಾಮ ಆಡಳಿತಾಧಿಕಾರಿ ಹುದ್ದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 03 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್‌ಸೈಟ್ ರಲ್ಲಿ ಪ್ರಕಟಿ http://www.koppal.nic.in ಸಲಾಗಿದೆ.

ಕೊಪ್ಪಳ.25.ಜೂನ್25: ಜಿಲ್ಲಾ ಕಂದಾಯ ಘಟಕದ ಕಲ್ಯಾಣ ಕರ್ನಾಟಕ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ 03 ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ರೋಸ್ಟ್ರ್ ಕಮ್ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಿದೆ.

ಪಟ್ಟಿ ಕುರಿತಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಮರ್ಥನೀಯ ದಾಖಲಾತಿಗಳೊಂದಿಗೆ  ಜೂನ್ 30 ರೊಳಗಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಲಿಖಿತವಾಗಿ ಸಲ್ಲಿಸಲು ಸೂಚಿಸಿದೆ. ನಿಗದಿತ ಅವಧಿ ಮುಗಿದ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿಗಳಾದ  ಸುರೇಶ ಬಿ.ಇಟ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology