Home » ಲೈವ್ ನ್ಯೂಸ್ » ಚುಳಕಿನಾಲಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ಚುಳಕಿನಾಲಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ಬೀದರ.18.ಅಗಸ್ಟ್.25:-ಬಸವಕಲ್ಯಾಣ ತಾಲೂಕಿನ ಮುಸ್ತಾಪೂರ ಗ್ರಾಮದ ಹತ್ತಿರವಿರುವ ಚುಳಕಿನಾಲಾ ಜಲಾಶಯ ಮೇಲ್ಭಾಗದ ಪ್ರದೇಶದಲ್ಲಿ ವ್ಯಾಪಕವಾಗಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಜಲಾಶಯದ ಒಳಹರಿವು ಹೆಚ್ಚಾಗುತ್ತಲಿರುವುದರಿಂದ ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿರುತ್ತದೆ.

ಸದರಿ ಜಲಾಶಯದ ಗರಿಷ್ಠ ಮಟ್ಟ ತಲುಪುವ ಸಂಭವ ಕಂಡಲ್ಲಿ ತಕ್ಷಣ ಚುಳಕಿನಾಲಾ ಜಲಾಶಯದ ಗೇಟುಗಳನ್ನು ತೆರೆದು ನದಿಗೆ ನೀರು ಬಿಡಲಾಗುವುದು.

ಆದಕಾರಣ ಜಲಾಶಯದ ಕೆಳಭಾಗದ ಗ್ರಾಮಗಳಿಗೆ ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ನದಿಯ ಕೆಳಭಾಗದ ತಳಪಾತ್ರದ ಅಕ್ಕಪಕ್ಕದ ಮುಚಾಳಂಬ, ಗೋರ್ಟ (ಬಿ), ರಾಚಪ್ಪ ಗೌಡಗಾಂವ, ಕೋಟಗೇರಾ, ಕುಟೆಗಾವ, ಲಾಧ, ಇಂಚೂರ್, ಹೊನ್ನಳ್ಳಿ, ಮೋರಂಬಿ ಗ್ರಾಮದ ಜನರು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು, ನದಿಯಲ್ಲಿ ಇಳಿಯುವುದಾಗಲಿ, ಬಟ್ಟೆ ಒಗೆಯುವುದಾಗಲಿ, ಈಜುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಮಾಡಬಾರದು.

ನದಿ ಪಾತ್ರದಲ್ಲಿರುವ ಸಣ್ಣ ನೀರಾವರಿ ಇಲಾಖೆ ಮತ್ತು ಇನ್ನೀತರ ಯಾವುದೇ ಇಲಾಖೆಗಳಿಗೆ ಸಂಬoಧಪಟ್ಟ ಆಸ್ತಿಗಳಿದ್ದಲ್ಲಿ ಸಂರಕ್ಷಿಸಿಕೊಳ್ಳಲು ಮುಂಜಾಗೃತೆ ವಹಿಸಿಕೊಳ್ಳುವಂತೆ ಬೀದರ ಕನೀನಿನಿ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology