Home » ಲೈವ್ ನ್ಯೂಸ್ » ಜೂನ್.21 ರಂದು ಹನ್ನೊಂದನೇಯ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ

ಜೂನ್.21 ರಂದು ಹನ್ನೊಂದನೇಯ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ

ಬೀದರ.21.ಜೂನ್.25:- ಜಿಲ್ಲಾಡಳಿತ ಬೀದರ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೀದರ ಹಾಗೂ ಇನ್ನಿತರ ಯೋಗ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜೂನ್. 21 ರಂದು ಹನ್ನೊಂದನೇಯ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 6.30 ಗಂಟೆಗೆ ಬೀದರ ಕೋಟೆಯಲ್ಲಿ ಧ್ಯೇಯವಾಕ್ಯ: ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ “ಯೋಗ ಸಂಗಮ” ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ.


ಕಾರ್ಯಕ್ರಮದ ಅಧ್ಯಕ್ಷತೆ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ. ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ ಹಾಗೂ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರುಗಳು ಭಾಗವಹಿಸಲಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology