Home » ಲೈವ್ ನ್ಯೂಸ್ » ದೈಹಿಕ ಶಿಕ್ಷಣ ಶಿಕ್ಷಕರು ಸೇರಿ 15000 ಶಿಕ್ಷಕರ ನೇಮಕ ಶಿಪ್ರ.

ದೈಹಿಕ ಶಿಕ್ಷಣ ಶಿಕ್ಷಕರು ಸೇರಿ 15000 ಶಿಕ್ಷಕರ ನೇಮಕ ಶಿಪ್ರ.

ಬೆಂಗಳೂರು.17.ಮಾರ್ಚ್.26: ರಾಜ್ಯ ಸರ್ಕಾರ ಇನ್ಮುಂದೆ 15,000 ಶಿಕ್ಷಕರ ನೇಮಕಾತಿ ವೇಳೆ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.

ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಚಿದಾನಂದ ಎಂ. ಗೌಡ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದು, ಪ್ರಸ್ತುತ ಪ್ರಾಥಮಿಕ ಶಾಲೆಗಳಲ್ಲಿ 3361, ಪ್ರೌಢಶಾಲೆಗಳಲ್ಲಿ 1861 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಖಾಲಿ ಇವೆ.

ದೈಹಿಕ ಶಿಕ್ಷಣ ಶಿಕ್ಷಕರು ಸೇರಿದಂತೆ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದಾರೆ,

ಕಳೆದ ಬಜೆಟ್ ನಲ್ಲಿ ಘೋಷಿಸಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಖಾಲಿ ಹುದ್ದೆಗಳು ಸೇರಿದಂತೆ 5262 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದ್ದಾರೆ,

ರಾಜ್ಯದಲ್ಲಿ ಸಂಯುಕ್ತ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಪರಿಶೀಲಿಸಲಾಗುವುದು. ಕಾರ್ಯಭಾರ ಆಧರಿಸಿ ಶಿಕ್ಷಕರ ನೇಮಕ ಮಾಡಲಾಗುವುದು. ವಿಷಯವಾರು ಹೊಸದಾಗಿ ಸೃಷ್ಟಿಸಬೇಕಾದ ಹುದ್ದೆಗಳ ಪ್ರಸ್ತಾವನೆ ಪರಿಶೀಲಿಸಲಾಗುತ್ತಿದೆ ಎಂದು ಬಿಜೆಪಿ ಸದಸ್ಯ ಎಸ್.ವಿ. ಸಂಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಾಹಿತಿ ನೀಡಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology