Home » ಲೈವ್ ನ್ಯೂಸ್ » ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜ ನೀಡುವ ಯೋಜನೆಯಡಿ ಅರ್ಜಿ ಆಹ್ವಾನ

ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜ ನೀಡುವ ಯೋಜನೆಯಡಿ ಅರ್ಜಿ ಆಹ್ವಾನ

ಬೀದರ.03.ಸೆಪ್ಟೆಂಬರ್.25:- ಕರ್ನಾಟಕ ಅಲ್ಪಸಂಖ್ಯಾತರ ಅಬಿವೃದ್ಧಿ ನಿಗಮದ ವತಿಯಿಂದ ಯುವಕ/ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಬೀದರ ಇವರ ವತಿಯಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ನವೋದ್ಯಮಗಳನ್ನು (Sಣಚಿಡಿಣuಠಿs) ಪ್ರಾರಂಭಿಸಲು ಉತ್ತೇಜನ ನೀಡುವ ಯೋಜನೆಯನ್ನು ವಿದ್ಯುನ್ಮಾನ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಸಹಯೋಗದೊಂದಿಗೆ ಇಟevಚಿಣe (ಒiಟಿoಡಿiಣies) 2025 ರಲ್ಲಿನ ಮಾರ್ಗಸೂಚಿಗಳೊಂದಿಗೆ ಜಾರಿಗೊಳಿಸಲು ಆದೇಶಿಸಿದ್ದು, ಈ ಯೋಜನೆಯ ಸದುಪಯೋಗವನ್ನು ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಯುವಕ/ಯುವತಿಯರಿಗೆ ನವೋದ್ಯಮಗಳನ್ನು (Sಣಚಿಡಿಣuಠಿs) ಪ್ರಾರಂಭಿಸುವ ಸಲುವಾಗಿ 50,00,000 ರೂ.ಗಳ ಸಹಾಯಧನವನ್ನು ನಿಗಮದ ವತಿಯಿಂದ ಆಯ್ಕೆಯಾದ ಫಲಾನುಭವಿಗಳಿಗೆ ನೀಡಲಾಗುತ್ತಿದೆ.

ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್.15 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಜಾದ ಭವನ, ಗುರುನಾನಕ ಝಿರಾ ದಿಂದ ಚಿಕಪೇಟ್ ರಿಂಗ ರಸ್ತೆ, ಬೀದರಗೆ ಅಥವಾ ದೂರವಾಣಿ ಸಂಖ್ಯೆ: 08482-467330 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology