Home » ಲೈವ್ ನ್ಯೂಸ್ » ಪದ್ಮಶ್ರೇಣಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪದ್ಮಶ್ರೇಣಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಯಚೂರು.08.ಜುಲೈ .26: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2026-27ನೇ ಸಾಲಿನಲ್ಲಿ ಸಮಾಜದ ಯಾವುದೇ ಕ್ಷೇತ್ರದಲ್ಲಿ ಅಂದರೆ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ, ಮತ್ತು ಇಂಜಿನಿಯರಿAಗ್, ಸಾರ್ವಜನಿಕ ವ್ಯವಹಾರಗಳು ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ ಪದ್ಮಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಯಚೂರು ಜಿಲ್ಲೆಯ ಆಸಕ್ತರು ತಮ್ಮ ಪ್ರಸ್ತಾವನೆಗಳನ್ನು ದಿನಾಂಕ : 14-07-2026 ರೊಳಗಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಈ ಕಚೇರಿಗೆ ಸಲ್ಲಿಸುವುದು. ನಂತರ ಬರುವ ಯಾವುದೇ ಪ್ರಸ್ತಾವನೆ/ಮನವಿಗಳನ್ನು ಪರಿಗಣಿಸಲು ಸಾಧ್ಯವಿರುವುದಿಲ್ಲ. ನಿಗದಿತ ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ರಾಯಚೂರು ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology