Home » ಲೈವ್ ನ್ಯೂಸ್ » ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ

ಬೀದರ.16.ಜುಲೈ.25:- ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ರೇಷ್ಮೆ ಇಲಾಖೆ ಮೂಲಕ ರೈತರು ಸೂಕ್ಷ್ಮ ನೀರಾವರಿ ಘಟಕಗಳನ್ನು (ಹನಿ ಮತ್ತು ತುಂತುರು ನೀರಾವರಿ) ಅಳವಡಿಸಿಕೊಂಡಿದ್ದರೆ ಅಥವಾ ಸೂಕ್ಷ್ಮ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ನಿರ್ಧರಿಸಿದರೆ ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಚಟುವಟಿಕೆಗಳ ವಿವರ: ವೈಯಕ್ತಿಕ ನೀರು ಸಂಗ್ರಹಣಾ ವಿನ್ಯಾಸಗಳು, ಕೇಂದ್ರೀಯ ಅಂತರ್ಜಲ ಮಂಡಳಿಯಿಂದ ಅಧಿಸೂಚನೆಯಾಗಿರುವ ಶೋಷಿತ, ನಿರ್ಣಾಯಕ ಮತ್ತು ಅರೆ ನಿರ್ಣಾಯಕ ಪ್ರದೇಶಗಳನ್ನು ಹೊರತುಪಡಿಸಿ, ಇತರೆ ಅಂತರ್ಜಲ ಸುರಕ್ಷಿತ ಪ್ರದೇಶಗಳಲ್ಲಿ ಕೊಳವೆ ಬಾವಿಗಳು ನಿರ್ಮಾಣ (ಅಲ್ಪ/ಮಧ್ಯಮ ಆಳದ), ಸಣ್ಣ ಬಾವಿಗಳ ಮರು ಸ್ಥಾಪನೆ/ನವೀಕರಣ, ಸ್ಥಗಿತಗೊಂಡಿರುವ ಕೊಳವೆ ಬಾವಿಗಳ ಮರು ಪೂರ, ಪೈಪ್/ಪ್ರಿ-ಕಾಸ್ಟ್ ವಿತರಣಾ ವ್ಯವಸ್ಥೆ, ನೀರೆತ್ತುವ ಸಾಧನೆಗಳು (ವಿದ್ಯುತ್, ಡೀಸೆಲ್, ಪವನ/ಸೌರ).

ಈ ಮೇಲಿನ ಸೌಲಭ್ಯಗಳನ್ನು ಪಡೆಯಲು ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology