Home » ಲೈವ್ ನ್ಯೂಸ್ » ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ


ಕೊಪ್ಪಳ.12.ಸೆಪ್ಟೆಂಬರ್.25: 2025-26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ರೈತರು ಅರ್ಜಿ ನಮೂನೆಯೊಂದಿಗೆ ಆಧಾರ್ ಕಾರ್ಡ್, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ, ನೋಟರಿಯೊಂದಿಗೆ ರೂ.20/- ಗಳ ಛಾಪಾ ಕಾಗದ, ಬ್ಯಾಂಕ್ ಪಾಸ್ ಬುಕ್, ಆರ್.ಟಿ.ಜಿ.ಎಸ್. ಪತ್ರಗಳನ್ನು ಸಲ್ಲಿಸಬೇಕು. ಎಫ್‌ಐಡಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ರೈತರು ಈಗಾಗಲೇ ಎಫ್‌ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಪಹಣಿಗಳನ್ನು ಎಫ್‌ಐಡಿಗೆ ಜೋಡಣೆ ಮಾಡಿಕೊಳ್ಳಬೇಕು.

ಆಸಕ್ತ ರೈತರು ಸಂಬoಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology