Home » ಲೈವ್ ನ್ಯೂಸ್ » ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಅಹ್ವಾನ

ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಅಹ್ವಾನ

ಬೀದರ.28.ಅಗಸ್ಟ್.25:- ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ 01 ತಿಂಗಳ ಪ್ರವಾಸಿ ಮಾರ್ಗದರ್ಶಿ ತರಬೇತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ ಜಿಲ್ಲೆಗೆ ಪರಿಶಿಷ್ಟ ಜಾತಿಗೆ 13 ಮತ್ತು ಪರಿಶಿಷ್ಟ ಪಂಗಡಕ್ಕೆ 08 ಗುರಿಗಳನ್ನು ನೀಡಿದ್ದು, ಪರಿಶಿಷ್ಟ ಜಾತಿಯ 05 ಗುರಿಗಳನ್ನು ಮತ್ತು ಪರಿಶಿಷ್ಟ ಪಂಗಡದಲ್ಲಿ 06 ಗುರಿಗಳನ್ನು ಬಾಕಿ ಉಳಿದಿರುತ್ತವೆ. ಪ್ರಯುಕ್ತ ಬಾಕಿ ಉಳಿದಿರುವ ಪರಿಶಿಷ್ಟ ಜಾತಿಯ 05 ಗುರಿಗಳು ಮತ್ತು ಪರಿಶಿಷ್ಟ ಪಂಗಡದಲ್ಲಿ 06 ಗುರಿಗಳಿಗೆ ಅರ್ಜಿ ಕರೆಯಲಾಗಿರುತ್ತದೆ.

ಸಲ್ಲಿಸಬೇಕಾದ ದಾಖಲೆಗಳು: 10ನೇ ತರಗತಿಯ ಅಂಕಪಟ್ಟಿಯ ಪ್ರತಿ, ಪದವಿ ಪೂರ್ವ ಶಿಕ್ಷಣದ ಅಂಕಪಟ್ಟಿ ಪ್ರತಿ, ತಹಸೀಲ್ದಾರರಿಂದ ಪಡೆದ ಜಾತಿ ಆದಾಯ ಮತ್ತು ವಾಸಸ್ಥಳ ಪ್ರಮಾಣ ಪತ್ರ ಹಾಗೂ ನಿರುದ್ಯೋಗ ಪ್ರಮಾಣ ಪತ್ರದ ಪ್ರತಿ, ಪಡಿತರ ಚೀಟಿ, ಆಧಾರ ಕಾರ್ಡ, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿ, ಅನುಭವ ಪ್ರಮಾಣ ಪತ್ರದ ಪ್ರತಿ.

ಆಸಕ್ತರು ಪ್ರವಾಸೋದ್ಯಮ ಇಲಾಖೆಯ ಕಚೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 30-08-2025 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಬೀದರ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology