Home » ಲೈವ್ ನ್ಯೂಸ್ » ಬೀದರ | ಇನ್ನೂ 100 ಕೋಟಿ ಬಿಡುಗಡೆಗೆ ಮುಖ್ಯಮಂತ್ರಿಗಳಿಗೆ ಮನವಿ.ಸಚಿವ ರಹೀಮ್ ಖಾನ್

ಬೀದರ | ಇನ್ನೂ 100 ಕೋಟಿ ಬಿಡುಗಡೆಗೆ ಮುಖ್ಯಮಂತ್ರಿಗಳಿಗೆ ಮನವಿ.ಸಚಿವ ರಹೀಮ್ ಖಾನ್

ಪ್ರವಾಹ ಪೀಡಿತ ಪ್ರದೇಶಗಳಿಗೆ 50 ಕೋಟಿ ತಕ್ಷಣ ಬಿಡುಗಡೆ.

ಇನ್ನೂ 100 ಕೋಟಿ ಬಿಡುಗಡೆಗೆ ಮುಖ್ಯಮಂತ್ರಿಗಳಿಗೆ ಮನವಿ.ಸಚಿವ ರಹೀಮ್ ಖಾನ್.


ಬೀದರ.31.ಅಗಸ್ಟ್.25:-  ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಮ್ ಖಾನ್ ಅವರು ಇಂದು ಬೀದರ ತಾಲ್ಲೂಕ
ವ್ಯಾಪ್ತಿಯ ಭಾರಿ ಮಳೆಯಿಂದ ಅತಿವೃಷ್ಟಿ ಪ್ರದೇಶಗಳಾದ ಸಂಗನಳ್ಳಿ, ಇಸ್ಲಾಂಪೂರ, ಇಮಾಮ್‍ಬಾದ್ ಹಳ್ಳಿ, ಮಾಲೆಗಾಂವ್, ಕಪಲಾಪೂರ, ಅಲಮಸ್‍ಪುರ, ಜಾಂಪಡ, ಅಲ್ಲಾಪೂರ ಹಾಗೂ ನೇಮತಾಬಾದ ಸ್ಥಳಕ್ಕೆ ಭೇಟಿ ಹಾಗೂ ಸ್ಥಳ ಪರಿಶೀಲನೆ
ನಡೆಸಿದರು.

ಮುಖ್ಯಮಂತ್ರಿಗಳು  ತಕ್ಷಣಕ್ಕೆ 50 ಕೋಟಿ ಪರಿಹಾರ ಅನುದಾನ ನೀಡಿದ್ದು  ಇನ್ನೂ 100 ಕೋಟಿ
ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಾಗಿದೆ
ಎಂದು ಸಚಿವರು ಹೇಳಿದರು.

ಅಲಿಯಂಬರ ಗ್ರಾಮದಲ್ಲಿ  ಹಾನಿಗೊಳಗಾದ ಸೇತುವೆಯ ದುರಸ್ತಿಗೆ 5 ಕೋಟಿ ಬಿಡುಗಡೆ ಮಾಡಲಾಗುವುದು.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾನಿಗೊಳಗಾದ ರಸ್ತೆ ಸೇತುವೆ ದುರಸ್ತಿ ಕಾರ್ಯ ಶೀಘ್ರವೇ ಕೈಗೊಳ್ಳಲು ಸಚಿವರು ಸೂಚಿಸಿದರು.

ಕಳೆದ ಮೂರು ದಿನಗಳಿಂದ ಸತತವಾಗಿ ಹಲವಾರು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು ಸಪ್ಟೆಂಬರ್ 6 ರಿಂದ ಮತ್ತೆ ಮಳೆ ಪ್ರವಾಹ ಪರಿಶೀಲನಾ ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದರು.

ಭಾರೀ ಮಳೆಯಿಂದಾಗಿ ರೈತರ ಹೊಲಗಳಲ್ಲಿ ಬೆಳಯಲಾದ ಹೆಸರು, ಉದ್ದು ಸೋಯಾಬೀನ್, ತೋಗರೆ, ಸಂಪೂರ್ಣವಾಗಿ ನಾಶವಾಗಿವೆ ಮತ್ತು ವಿವಿಧ ಸ್ಥಳಗಳಲ್ಲಿ ಅನೇಕ ಮನೆಗಳು ಕುಸಿದಿವೆ. ಪ್ರತಿಯೊಂದು ವಿಪತ್ತು ಮತ್ತು ಹಾನಿಯ ವರದಿ ಮಾಡಲು ಮತ್ತು ರೈತರಿಗೆ ಸಕಾಲದಲ್ಲಿ ಪರಿಹಾರ ನೀಡಲು ಜಂಟಿ ಇಲಾಖಾ ಸಮೀಕ್ಷೆಯನ್ನು ಮಾಡಲು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಬೆಳೆ  ಹಾನಿ ಮತ್ತು ಮನೆ ಹಾನಿಗೆ ಎಸ್‍ಡಿಆರ್‍ಏಫ್ ಮತ್ತು ಎನ್‍ಡಿಆರ್‍ಎಫ್ ಅಡಿಯಲ್ಲಿ ತಕ್ಷಣ ಪರಿಹಾರ ನೀಡಲಾಗುವುದು.
ಈ ಸಂದರ್ಭದಲ್ಲಿ ಬೀದರ ಸಹಾಯಕ ಆಯುಕ್ತ ಮೊಹಮದ್ ಶಕೀಲ್, ಬೀದರ ತಹಸಿಲ್ದಾರ್ ರವೀಂದ್ರ ಧಾಮಾ, ಕೃಷಿ ಇಲಾಖೆ ಉಪ ನಿರ್ದೇಶಕ ಇಕ್ಬಾಲ್ ಅನ್ಸಾರಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Author

ಪ್ರಮುಖ ಸುದ್ದಿ

Stock market

Astrology