Home » ಲೈವ್ ನ್ಯೂಸ್ » ಬೀದರ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಬೀದರ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಬೀದರ.04. ಜೂನ್.25:- 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ/ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ (ಪಿಯುಸಿ, ಡಿಪ್ಲೋಮಾ, ಐಐಟಿಐ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ) ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕಾ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಹರು ಅನ್‌ಲೈನ್  https://shp.karnataka.gov.in/mwd     ಮೂಲಕ ದಿನಾಂಕ: 28-06-2025 ರೊಳಗಾಗಿ ಅರ್ಜಿ

ಸಲ್ಲಿಸಬಹುದಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ 

https//mwd.karnataka.gov.in/  ನೋಡಬಹುದು ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಸತಿ ನಿಲಯಗಳಿಗೆ ಅಥವಾ ತಾಲ್ಲೂಕ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ಬೀದರಗೆ ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8277799990, 08482-224150ಗೆ ಸಂಪರ್ಕಿಸಬಹುದಾಗಿದೆoದು ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology