Home » ಲೈವ್ ನ್ಯೂಸ್ » ಮಂಗಳೂರು ಗ್ರಾಮ: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು ಗ್ರಾಮ: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.13.ಜೂನ್.26: ಜಿಲ್ಲೆಯ ಕುಕನೂರು ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ 2026-27ನೇ ಸಾಲಿನ ಐ.ಎಂ.ಸಿ ಕೋಟಾದಡಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎನ್.ಸಿ.ವಿ.ಟಿ ಸಂಯೋಜನೆ ಹೊಂದಿರುವ 2 ವರ್ಷಗಳ ಅವಧಿಯ ಎಲೆಕ್ಟ್ರಿಷಿಯನ್ ಹಾಗೂ ಫಿಟ್ಟರ್ ವೃತ್ತಿಗಳಲ್ಲಿ ತಲಾ 4 ಸ್ಥಾನಗಳು ಲಭ್ಯವಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪ್ರಕ್ರಿಯೆಯನ್ನು ಜೂನ್ 4 ರಂದು ನಡೆಸಲಾಗುತ್ತಿದ್ದು, “ಮೊದಲು ಬಂದವರಿಗೆ ಮೊದಲ ಆದ್ಯತೆ” ಎಂಬ ನಿಯಮದ ಮೇರೆಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಪ್ರವೇಶ ಹಾಗೂ ದಾಖಲಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಮಂಗಳೂರು ಗ್ರಾಮ, ಇಲ್ಲಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಸಂಸ್ಥೆಯ ತರಬೇತಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology