Home » ಲೈವ್ ನ್ಯೂಸ್ » ಮಹಾರಾಷ್ಟ್ರ ಡಿಸಿಎಂ ಅಜಿತ ಪವಾರ್ ನಿಧನಕ್ಕೆ ಶಾಸಕ ಪ್ರಭು ಚವ್ಹಾಣ ಸಂತಾಪ

ಮಹಾರಾಷ್ಟ್ರ ಡಿಸಿಎಂ ಅಜಿತ ಪವಾರ್ ನಿಧನಕ್ಕೆ ಶಾಸಕ ಪ್ರಭು ಚವ್ಹಾಣ ಸಂತಾಪ

ಔರಾದ್.29.ಜನವರಿ.26: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ನಿಧನಕ್ಕೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮಹಾರಾಷ್ಟ್ರ ರಾಜಕೀಯದ ಪ್ರಭಾವಶಾಲಿ ನಾಯಕರಾಗಿದ್ದ ಪವಾರ್ ಅವರು ದೀರ್ಘಕಾಲದ ವರೆಗೆ ಉಪ ಮುಖ್ಯಮಂತ್ರಿಯಾಗಿ ಕೆಲಸ‌ ಮಾಡಿದ್ದಾರೆ. ಹಣಕಾಸು ಮತ್ತು ನೀರಾವರಿ ಮುಂತಾದ ಪ್ರಮುಖ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. 

ಸಾರ್ವಜನಿಕ ಜೀವನದಲ್ಲಿ ಸರಳತೆ, ನಿಷ್ಠೆ ಹಾಗೂ ಸೇವಾಭಾವನೆಗೆ ಹೆಸರಾದ ಅಜಿತ ಪವಾರ್ ಅವರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕರಾಗಿದ್ದರು. ಅವರ ಅಗಲಿಕೆಯಿಂದ ದೇಶದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.

ಅಜಿತ ಪವಾರ್ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶಾಸಕರು ಪ್ರಾರ್ಥಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology