Home » ಲೈವ್ ನ್ಯೂಸ್ » ಮಹಿಳೆ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಮಹಿಳೆ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.20.ಜೂನ.25:-  ಗಂಗಾವತಿ ತಾಲ್ಲೂಕಿನ ದಾಸನಾಳ ಗ್ರಾಮದ ನಿವಾಸಿ 40 ವರ್ಷದ ಕೆರೆಯಮ್ಮ ಗಂಡ ಶಂಕ್ರಪ್ಪ ಯರಬಟ್ಟಿ ಎಂಬ ಮಹಿಳೆ 2023ರ ಫೆಬ್ರವರಿ 23 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ:46/2023 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ:


ಕಾಣೆಯಾದ ಮಹಿಳೆಯು 5 ಅಡಿ ಎತ್ತರ, ದುಂಡು ಮುಖ, ಸಾದಗಪ್ಪು ಮೈ ಬಣ್ಣ ಹೊಂದಿದ್ದು, ಕಾಣೆಯಾದಾಗ ಸೀರೆ ಮತ್ತು ಜಂಪರ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ.
ಮೇಲ್ಕಂಡ ಚಹರೆಯ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಗಂಗಾವತಿ ಗ್ರಾಮೀಣ ಪೋಲಿಸ್ ಠಾಣೆ ಪಿಐ ದೂ.ಸಂ: 08533-230854, 9480803730 ಎಸ್‌ಪಿ ಕಚೇರಿ: 08539-230111 ಗೆ ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

Author

ಪ್ರಮುಖ ಸುದ್ದಿ

Stock market

Astrology