Home » ಲೈವ್ ನ್ಯೂಸ್ » ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೀದರ.28.ಅಗಸ್ಟ್.25:- 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳು ವೆಬ್‍ಸೈಟ್ https://ssp.postmatric.karnataka.gov.in  ದಲ್ಲಿ ದಿನಾಂಕ: 30-09-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಕ್ಕಾಗಿ https://bcwd.karnataka.gov.in  ವೆಬ್‍ಸೈಟ್‍ನ್ನು ನೋಡಬಹುದು ಮತ್ತು ರಾಜ್ಯ ವಿದ್ಯಾರ್ಥಿ ವೇತನದ ಸಹಾಯವಾಣಿ 1902 ಅಥವಾ ಇ-ಮೇಲ್ Postmatric@karnataka.gov.in ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ 8050770005 ಅಥವಾ ಇಮೇಲೆ bcwdhelpline@gmail.com ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology