Home » ಲೈವ್ ನ್ಯೂಸ್ » ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಎಲ್ಲ ಆಸ್ಪತ್ರೆಗಳಲ್ಲೂ ಟೆಲಿ ECG ವ್ಯವಸ್ಥೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಎಲ್ಲ ಆಸ್ಪತ್ರೆಗಳಲ್ಲೂ ಟೆಲಿ ECG ವ್ಯವಸ್ಥೆ.

ಬೆಂಗಳೂರು.19.ಆಗಸ್ಟ್.25:- ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳ ಜೊತೆ ಕಡ್ಡಾಯವಾಗಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್ ಆರಂಭ: ಎಲ್ಲ ಆಸ್ಪತ್ರೆಗಳಲ್ಲೂ ಟೆಲಿ ಇಸಿಜಿ ವ್ಯವಸ್ಥೆ ಸರ್ಕಾರ ಭರವಸೆ.

ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ಜೊತೆಗೆ ಟ್ರಾಮಾ ಕೇಂದ್ರಗಳನ್ನು ಪ್ರಾರಂಭಿಸಲಿದ್ದು, ಮುಂದಿನ ಐದು ವರ್ಷಗಳಲ್ಲಿ ಈ ಎಲ್ಲ ಆಸ್ಪತ್ರೆಗಳಲ್ಲೂ ಗುಣಮಟ್ಟದ ಸೇವೆ ಒದಗಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಹೃದಯಾಘಾತದ ಸಾವುಗಳ ತಡೆಗೆ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸಲಾಗುವುದು. ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆ, ಬೆಂಗಳೂರಿನ ಸರ್‌ ಸಿ.ವಿ.ರಾಮನ್‌ ನಗರ ಸಾರ್ವಜನಿಕ ಆಸ್ಪತ್ರೆ ಹಾಗೂ ಹೊಸಪೇಟೆ ಆಸ್ಪತ್ರೆಗಳಲ್ಲಿ ಹೃದಯ ರಕ್ತನಾಳಗಳ ಸಂಬಂಧಿತ ಚಿಕಿತ್ಸೆ ನೀಡುವ ಕ್ಯಾತ್‌ ಲ್ಯಾಬ್‌ ತೆರೆಯಲಾಗುವುದು.

ಗೃಹ ಆರೋಗ್ಯ ಯೋಜನೆಯಡಿ 30 ವರ್ಷ ಮೇಲ್ಪಟ್ಟವರನ್ನು ತಪಾಸಣೆಗೆ ಒಳಪಡಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

Author

ಪ್ರಮುಖ ಸುದ್ದಿ

Stock market

Astrology