Home » ಲೈವ್ ನ್ಯೂಸ್ » ರಾಜ್ಯಾದ್ಯಂತ 13000 ಶಿಕ್ಷಕರ ನೇಮಕಕ್ಕೆ ನಿರ್ಧಾರ: ಶಿಕ್ಷಣ ಸಚಿವ ಮಧುಬಂಗಾರಪ್ಪ

ರಾಜ್ಯಾದ್ಯಂತ 13000 ಶಿಕ್ಷಕರ ನೇಮಕಕ್ಕೆ ನಿರ್ಧಾರ: ಶಿಕ್ಷಣ ಸಚಿವ ಮಧುಬಂಗಾರಪ್ಪ

ಶಿಮೊಗಾ.21.ಆಕ್ಟೋಬರ.25:- ರಾಜ್ಯದಲ್ಲಿ ಟಿಇಟಿ ಶಿಕ್ಷರ ಅರ್ಹತೆ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಅ.23ರಿಂದ ನ.9ರ ವರೆಗೂ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ  ಮತ್ತು ಮುಂಬರುವ ಡಿ.7ಕ್ಕೆ ಟಿಇಟಿ ಪರೀಕ್ಷೆ, ಡಿ.31ಕ್ಕೆ ಫಲಿತಾಂಶ: ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ

ರಾಜ್ಯ ಸರ್ಕಾರ ರಾಜ್ಯಾದ್ಯಂತ 13000 ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬ‌ರ್9 ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಡಿಸೆಂಬರ್ 7 ರಂದು ಟಿಇಟಿ ಪರೀಕ್ಷೆ ನಡೆಸಿ, ಡಿಸೆಂಬರ್31ರಂದು ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾದ ಎಂದು ಹೇಳಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 4,780 ಶಿಕ್ಷಕರನ್ನು ನೇಮಕಾತಿ ಮಾಡಿದ್ದರು. ನಾನು ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಪ್ರಥಮ ವರ್ಷದಲ್ಲಿ 13000 ಶಿಕ್ಷಕರನ್ನು ನೇಮಕ ಮಾಡಿದ್ದೆ.

ಈಗ ಮತ್ತೆ 13000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದೇನೆ. ಕಳೆದ ಎರಡೂವರೆ ವರ್ಷದಲ್ಲಿ 26000 ಶಿಕ್ಷಕರ ನೇಮಕಾತಿ ಮಾಡಿದಂತಾಗುತ್ತದೆ ಎಂದು ಹೇಳಿದರು. ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800 ಕೆಪಿಎಸ್‌ ಶಾಲೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.

Author

ಪ್ರಮುಖ ಸುದ್ದಿ

Stock market

Astrology