Home » ಲೈವ್ ನ್ಯೂಸ್ » ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಿತ್ರದುರ್ಗ.17.ಜುಲೈ.25: ರಾಷ್ಟ್ರ ಪ್ರಶಸ್ತಿ-2025″ ನೀಡುವ ಕುರಿತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ ಪ್ರತಿ ವರ್ಷದ ಡಿಸೆಂಬರ್ 03ರಂದು ಆಚರಿಸಲಾಗುವ ರಾಷ್ಟ್ರ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಸಮಾರಂಭದಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದ್ದು,

ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಜಾಲತಾಣ  ಮತ್ತು ರಾಷ್ಟ್ರೀಯ http://www.depwd.gov.in ಪುರಸ್ಕಾರ ಪೋರ್ಟಲ್ http://www.awards.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ವಿಕಲಚೇತನರ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳು “ರಾಷ್ಟ್ರ ಪ್ರಶಸ್ತಿ-2025″ಕ್ಕೆ ಅರ್ಜಿಯನ್ನು ಆನ್‍ಲೈನ್ ಮೂಲಕ ಎಲ್ಲಾ ಪೂರಕ ದಾಖಲಾತಿಗಳೊಂದಿಗೆ ಸಲ್ಲಿಸಿ, ಅರ್ಜಿ ಸಲ್ಲಿಸಿದ ದಾಖಲಾತಿಗಳ 02 ಪ್ರತಿಗಳನ್ನು ಚಿತ್ರದುರ್ಗ ನಗರದ ಒನಕೆ ಓಬವ್ವ ಸ್ಟೇಡಿಯಂ ರಸ್ತೆ, ಜಿಲ್ಲಾ ಬಾಲಭವನ ಆವರಣ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology