Home » ಲೈವ್ ನ್ಯೂಸ್ » ವಿಜಯಸಿಂಗ್ ಅವರ ಪ್ರಯತ್ನದಿಂದಾಗಿ ಜಿಲ್ಲೆಯ ಬಸವಕಲ್ಯಾಣ ನಗರಕ್ಕೆ ಹೊಸ ವಸತಿ ಶಾಲೆ ಮಂಜೂರು.

ವಿಜಯಸಿಂಗ್ ಅವರ ಪ್ರಯತ್ನದಿಂದಾಗಿ ಜಿಲ್ಲೆಯ ಬಸವಕಲ್ಯಾಣ ನಗರಕ್ಕೆ ಹೊಸ ವಸತಿ ಶಾಲೆ ಮಂಜೂರು.

ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಮನವಿಗೆ ಸರ್ಕಾರದ ಸ್ಪಂದನೆ ಬಸವಕಲ್ಯಾಣಕ್ಕೆ ವಸತಿ ಶಾಲೆ ಮಂಜೂರು

ಬೀದರ.29.ಮೇ .25:- ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರ ಪ್ರಯತ್ನದಿಂದಾಗಿ ಜಿಲ್ಲೆಯ
ಬಸವಕಲ್ಯಾಣ ನಗರಕ್ಕೆ ಹೊಸ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದೆ.ಈ ಕುರಿತು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಎಜಾಸ್ ಪಾಷ ಬುಧವಾರ ಆದೇಶ ಹೊರಡಿಸಿದ್ದಾರೆ.


ಬಸವಕಲ್ಯಾಣದಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಲು
ವಿಜಯಸಿಂಗ್ ಅವರು ಅಲ್ಪಸಂಖ್ಯಾತರ ಖಾತೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಮನವಿ
ಪತ್ರ ಸಲ್ಲಿಸಿದ್ದರು. ತಾಲ್ಲೂಕಿನಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ಅಧಿಕ ಇದೆ. ಹೀಗಾಗಿ ವಸತಿ ಶಾಲೆ ಮಂಜೂರು
ಮಾಡಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಕೋರಿದ್ದರು.


ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ವಸತಿ ಶಾಲೆ ಪ್ರಾರಂಭಿಸಲು
ಆಡಳಿತಾತ್ಮಕ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ.
ಸರ್ಕಾರ, ವಸತಿ ಶಾಲೆ ಮಂಜೂರು ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿರುವ ವಿಜಯಸಿಂಗ್
ಅವರು, ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಶಾಲೆಯ ಪ್ರಯೋಜನ ಪಡೆಯಬೇಕು ಎಂದು ಮನವಿ
ಮಾಡಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology