Home » ಲೈವ್ ನ್ಯೂಸ್ » ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು.07.ಜನವರಿ.26:  2025-26ನೆ ಸಾಲಿನ ಸಾಧನೆ ಯೋಜನೆಯ ಸೌಲಭ್ಯ ಪಡೆಯಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅರ್ಹ ವಿಕಲಚೇತರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 31, 2026 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಆಸಕ್ತ ವಿಕಲೇಚತನ ಫಲಾನುಭವಿಗಳು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಸೇವಾ ಸಿಂಧು ಪೋರ್ಟಲ್ ( https://sevasindhu.karnataka.gov.in/…/DepartmentServices) ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ-560029 ಅಥವಾ ದೂರವಾಣಿ ಸಂಖ್ಯೆ-080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join

https://chat.whatsapp.com/E3MQdI7eJEPJFB62jcnKlA?mode=wwt

Author

ಪ್ರಮುಖ ಸುದ್ದಿ

Stock market

Astrology