Home » ಲೈವ್ ನ್ಯೂಸ್ » ವಿಶ್ವಕರ್ಮ ಭಾವಚಿತ್ರ ಮೆರವಣಿಗೆಗೆ ಸಚಿವರಿಂದ ಚಾಲನೆ

ವಿಶ್ವಕರ್ಮ ಭಾವಚಿತ್ರ ಮೆರವಣಿಗೆಗೆ ಸಚಿವರಿಂದ ಚಾಲನೆ

ರಾಯಚೂರು.18.ಸೆಪ್ಟೆಂಬರ್.25 ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆ.17ರಂದು ಹಮ್ಮಿಕೊಂಡಿದ್ದ ವಿಶ್ವಕರ್ಮ ಭಾವಚಿತ್ರ ಮೆರವಣಿಗೆಗೆ ನಗರದ ಮಂತ್ರಾಲಯ ರಸ್ತೆಯಲ್ಲಿನ ವಿಶ್ವಕರ್ಮ ವೃತ್ತದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಚಾಲನೆ ನೀಡಿದರು.

ಈ ವೇಳೆ ಮಹರ್ಷಿ ವಾಲ್ಮೀಕಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಶರಣಗೌಡ ಪಾಟೀಲ ಬಯ್ಯಾಪುರ, ಎ.ವಸಂತಕುಮಾರ, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ರಾಯಚೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪವನ್ ಕಿಶೋರ್ ಪಾಟೀಲ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳ ಪ್ರಮುಖರು, ಸಮಾಜದ ಮುಖಂಡರು ಇದ್ದರು.

Author

ಪ್ರಮುಖ ಸುದ್ದಿ

Stock market

Astrology