Home » ಲೈವ್ ನ್ಯೂಸ್ » ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ12.ಜೂನ್.25:-ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟಗೇರಿ ನಿವಾಸಿ ಶರಣಬಸವ ಅಂದಪ್ಪ ಮೆಣಸಿನಕಾಯಿ ಎಂಬ 47 ವರ್ಷದ ವ್ಯಕ್ತಿಯು ಜೂನ್ 07 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಕುರಿತು ಅಳವಂಡಿ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.55/2025 ಕಲಂ ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ.

ಕಾಣೆಯಾದ ವ್ಯಕ್ತಿಯ ಚಹರೆ:
ವ್ಯಕ್ತಿಯು 5.30 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕಾಣೆಯಾದಾಗ ತಿಳಿ ಗುಲಾಬಿ ಬಣ್ಣದ ಅಂಗಿ ಮತ್ತು ಕಪ್ಪು ಬಣ್ಣ ಪ್ಯಾಂಟ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ.

ಮೇಲ್ಕಂಡ ಚಹರೆಯ ವ್ಯಕ್ತಿ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಕೊಪ್ಪಳ ಎಸ್‌ಪಿ: 08539-230111, ಡಿವೈಎಸ್‌ಪಿ:08539-230342, ಸಿಪಿಐ(ಗ್ರಾ): 08539-231333, ಪಿಎಸ್‌ಐ ಅಳವಂಡಿ: 08539-285233, ಮೊ.ಸಂ. 9480803747, ಜಿಲ್ಲಾ ಕಂಟ್ರೋಲ್ ರೂಂ. 08539-230222, 100 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಅಳವಂಡಿ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.

Author

ಪ್ರಮುಖ ಸುದ್ದಿ

Stock market

Astrology