Home » ಲೈವ್ ನ್ಯೂಸ್ » ಶೀಘ್ರದಲ್ಲೇ 15,000 ಪೊಲೀಸ್ ಹುದ್ದೆಗಳು ಭರ್ತಿ.ಗೃಹ ಸಚಿವ ಡಾ.ಜಿ.ಪರಮೇಶ್ವರ್

ಶೀಘ್ರದಲ್ಲೇ 15,000 ಪೊಲೀಸ್ ಹುದ್ದೆಗಳು ಭರ್ತಿ.ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು.27.ಮೇ.25:- ರಾಜ್ಯದ ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳು ಭರ್ತಿ ಮಾಡಲಾಗುವುದು. ಈಗಾಗಲೇ 544 ಪಿಎಸ್‌ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‌ಐ ಫಲಿತಾಂಶ ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ  ಗೃಹ ಸಚಿವ ಡಾ.ಜಿ  ಪರಮೇಶ್ವರ್ ಮಾತನಾಡಿದರು.

ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ.

ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ‌. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್‌ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ ಪಟ್ಟುಕೊಳ್ಳದೇ, ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.

ರಿಯಲ್ ಎಸ್ಟೇಟ್ ದಂಧೆಯ ಏಜೆಂಟ್‌ಗಳೊಂದಿಗೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಶಾಮಿಲಾಗುವುದನ್ನು ಸಹಿಸಲಾಗುವುದಿಲ್ಲ. ಅವರೊಂದಿಗೆ ತೊಡಗಿರುವುದು ಕಂಡುಬಂದರೆ‌, ಯಾವುದೇ ರೀತಿಯ ಮುಲಾಜಿಲ್ಲದೇ ಕೂಡಲೇ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ ಎಂದರು.

ರಾಜ್ಯದಾದ್ಯಂತ ಮನೆಮನೆಗೆ ಪೊಲೀಸ್‌ ನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು‌. ಸಾರ್ವಜನಿಕರಿಗೆ ತೊಂದರೆ ಇದ್ದರೆ, ಪೊಲೀಸರ ಸಹಾಯ ಬೇಕಿದ್ದರೆ ಆಲಿಸಲಿದ್ದಾರೆ ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು. ಪಾಲಕರ ಸಭೆಗಳಲ್ಲಿ ಪೊಲೀಸರು ಭಾಗವಹಿಸಬೇಕು.

ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮ, ಟ್ರಾಫಿಕ್ ನಿಯಮಗಳು ಸೇರಿದಂತೆ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕು. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

Author

ಪ್ರಮುಖ ಸುದ್ದಿ

Stock market

Astrology