Home » ಲೈವ್ ನ್ಯೂಸ್ » ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೈಜ್ ಮನಿ PRIZE MONEY ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೈಜ್ ಮನಿ PRIZE MONEY ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ

ಬೆಂಗಳೂರು.15.ಏಪ್ರಿಲ್.26:  2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಡಿಪ್ಲೊಮಾ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ‘ಪ್ರೈಜ್ ಮನಿ’ವಿದ್ಯಾರ್ಥಿವೇತನ ನೀಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.

ರಾಜ್ಯದ ಅರ್ಹ ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮೊದಲ ಪ್ರಯತ್ನದಲ್ಲೇ ಕನಿಷ್ಠ ಶೇಕಡಾ 60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಈ ಆರ್ಥಿಕ ನೆರವಿಗೆ ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕೋರ್ಸ್‌ಗಳಿಗೆ ಅನುಗುಣವಾಗಿ ಸರ್ಕಾರವು ಈ ಪ್ರೋತ್ಸಾಹಧನವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಿದೆ.

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ

ಈ ಯೋಜನೆಯಡಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 7,000 ರೂಪಾಯಿ, ದ್ವಿತೀಯ ಪಿಯುಸಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ 20,000 ರೂಪಾಯಿ ಮತ್ತು ವಿವಿಧ ಪದವಿ ವಿದ್ಯಾರ್ಥಿಗಳಿಗೆ 25,000 ರೂಪಾಯಿಗಳವರೆಗೆ ಪ್ರೋತ್ಸಾಹಧನ ದೊರೆಯಲಿದೆ. ಇನ್ನು ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿಭಾಗದ ವಿದ್ಯಾರ್ಥಿಗಳಿಗೆ ಗರಿಷ್ಠ 35,000 ರೂಪಾಯಿಗಳವರೆಗೆ ಹಣವನ್ನು ನೀಡಲಾಗುತ್ತಿದೆ.

ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಅಂಕಪಟ್ಟಿ ಹಾಗೂ ಬ್ಯಾಂಕ್ ಪಾಸ್‌ಬುಕ್ ವಿವರಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರವು ಪ್ರತಿ ವರ್ಷ ಈ ಯೋಜನೆಯನ್ನು ಜಾರಿಗೆ ತರುತ್ತಿದ್ದು.

ಅರ್ಹ ವಿದ್ಯಾರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಿ ಈ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಇಲಾಖೆ ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ಅಥವಾ ಹತ್ತಿರದ ಕರ್ನಾಟಕ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ.

Author

ಪ್ರಮುಖ ಸುದ್ದಿ

Stock market

Astrology