Home » ಲೈವ್ ನ್ಯೂಸ್ » ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ಪ್ಲಸ್ ಅಡಿ ಅರಿವು ಕಾರ್ಯಾಗಾರ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವನಿಧಿ ಪ್ಲಸ್ ಅಡಿ ಅರಿವು ಕಾರ್ಯಾಗಾರ

ಕೊಪ್ಪಳ.26.ಫೆಬ್ರವರಿ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಯುವನಿಧಿ ಪ್ಲಸ್ ಅಡಿಯಲ್ಲಿ ಉಚಿತವಾಗಿ ಕೌಶಲ್ಯ ತರಬೇತಿ ನೀಡಲು ಗುರುವಾರದಂದು ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಗವಿಶಂಕರ್ ಕೆ., ಜಿಲ್ಲಾ ಉದ್ಯೋಗಾಧಿಕಾರಿ ಮಂಜುಳಾ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ವೈ.ಬಿ ಅಂಗಡಿ,  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಪ್ರಾಂಶುಪಾಲರಾದ ಮೌನೇಶ ರಾಠೋಡ್, ಸಹಾಯಕ ನಿರ್ದೇಶಕ ಮಂಜುನಾಥ ಬೆಲ್ಲದ್, ಸಿಡಾಕ್ ತರಬೇತಿ ಅಧಿಕಾರಿ ಶೋಭಾ, ಕುಕನೂರಿನ ಸರ್ಕಾರಿ ಕೈಗಾರಿಕಾ ಕೇಂದ್ರದ ಪ್ರಭಾರಿ ಪ್ರಾಂಶುಪಾಲರಾದ ಮಂಜಪ್ಪ,  ಸರ್ಕಾರಿ ಕೈಗಾರಿಕಾ ಕೇಂದ್ರ ತಳಕಲ್‌ನ ಪ್ರಭಾರಿ ಪ್ರಾಂಶುಪಾಲರಾದ ಮಹ್ಮದ ರಫಿ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಯವರು ಮತ್ತು 250ಕ್ಕೂ ಹೆಚ್ಚು ಅಭ್ಯರ್ಥಿಗಳು, ಯುವನಿಧಿ ಫಲಾನುಭವಿಗಳು ತರಬೇತಿ ಕಾರ್ಯಾಗಾರದಲ್ಲಿ ಹಾಜರಿದ್ದು ಮಾಹಿತಿ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Author

ಪ್ರಮುಖ ಸುದ್ದಿ

Stock market

Astrology