Home » ಲೈವ್ ನ್ಯೂಸ್ » ಸ್ವಚ್ಛಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ-ನ್ಯಾ.ಪ್ರಕಾಶ ಬನಸೋಡೆ

ಸ್ವಚ್ಛಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ-ನ್ಯಾ.ಪ್ರಕಾಶ ಬನಸೋಡೆ

ಬೀದರ.28.ಜೂನ್.25:- ಹುಟ್ಟುವ ಮಗುವಿನಿಂದ ಸಾಯುವ ವಯೋವೃದ್ಧದವರೆಗೂ ಸ್ವಚ್ಚಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಅವರು ತಿಳಿಸಿದ್ದಾರೆ.

ಅವರು ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಕಾರಾಗೃಹ ಬೀದರ ಇವರ ಸಂಯುಕ್ತಾಶ್ರಯದಲ್ಲಿ “ಅಂತರರಾಷ್ರ‍್ಟೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನ ಹಾಗೂ ಕಾರಾಗೃಹದಲ್ಲಿರುವ ಬಂಧಿಗಳ ಹಕ್ಕುಗಳ” ಅಂಗವಾಗಿ ಬೀದರ ಜಿಲ್ಲಾ ಕಾರಾಗೃಹದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಪ್ಪುಗಳು ಸಹಜ ಅವುಗಳನ್ನು ತಿದ್ದಿಕೊಂಡು ಬಂಧಿಗಳು ಮನವನ್ನು ಪರಿವರ್ತನೆಗೊಳಿಸಿಕೊಂಡು ಉತ್ತಮ ಜೀವನ ನಡೆಸಬೇಕೆಂದರು.

ಇದೇ ಸಂದರ್ಭದಲ್ಲಿ ಜೈಲಿನಲ್ಲಿರುವ ದೃಷ್ಠಿದೋಷವಿರುವ ಕೈದಿಗಳಿಗೆ ಕನ್ನಡಕವನ್ನು ವಿತರಿಸಿದ್ದರು.

ಈ ಕಾರ್ಯಕ್ರಮದಲ್ಲಿ ಅಬ್ದುಲ ಹಫೀಜ ಎಲ್‌ಎಡಿಸಿ ವಕೀಲರು, ಜಿಲ್ಲಾ ಕಾರಾಗೃಹ ಅಧೀಕ್ಷಕ ದತ್ತಾತ್ರಿ ಆರ್. ಮೇದಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಸನ್ಮುಖಯ್ಯಾ ಬಿ. ಸ್ವಾಮಿ, ಉಪಾಧ್ಯಕ್ಷ ಶಿವಕುಮಾರ ಮಾಲಿಪಾಟೀಲ, ಕಾನೂನು ಪ್ರಾಧಿಕಾರದ ಸಿಬ್ಬಂದಿಗಳು, ಜಿಲ್ಲಾ ಕಾರಾಗೃಹ ಸಿಬ್ಬಂದಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಎಲ್‌ಎಡಿಸಿ ವಕೀಲರು ಹಾಗೂ ರೋಟರಿ ಕ್ಲಬ ಸಿಬ್ಬಂಧಿ ವರ್ಗದವರು ಸೇರಿದಂತೆ ಇತರರ ಉಪಸ್ಥಿತರಿದ್ದರು.

Author

ಪ್ರಮುಖ ಸುದ್ದಿ

Stock market

Astrology