Home » ಲೈವ್ ನ್ಯೂಸ್ » ಹುಮನಾಬಾದ: ಮೆಟ್ರಿಕ್ ಪೂರ್ವ/ನಂತರ ಬಾಲಕ-ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಹುಮನಾಬಾದ: ಮೆಟ್ರಿಕ್ ಪೂರ್ವ/ನಂತರ ಬಾಲಕ-ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.27.ಮೇ.25:-ಸಮಾಜ ಕಲ್ಯಾಣ ಇಲಾಖೆ ಹುಮನಾಬಾದ / ಚಿಟಗುಪ್ಪಾ ತಾಲೂಕಿನ ಅಡಿಯಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ/ನಂತರ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2025-26 ನೇ ಸಾಲಿನ ವಿದ್ಯಾರ್ಥಿಗಳ ಖಾಲಿ ಸ್ಥಾನಗಳು ಭರ್ತಿ ಮಾಡಲು ಪ.ಜಾತಿ/ ಪ.ಪಂ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಹುಮನಾಬಾದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹುಮನಾಬಾದ ತಾಲ್ಲೂಕಿನ ವಸತಿ ನಿಲಯಗಳ ವಿವರ: ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಹುಮನಾಬಾದ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಹುಡಗಿ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಹಳ್ಳಿಖೇಡ್ (ಬಿ). ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಹಳ್ಳಿಖೇಡ್ (ಕೆ). ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ದುಬುಲಗುಂಡಿ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಹುಮನಾಬಾದ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯ ಹುಮನಾಬಾದ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ ಹುಮನಾಬಾದ.


ಚಿಟಗುಪ್ಪಾ ತಾಲ್ಲೂಕಿನ ವಸತಿ ನಿಲಯಗಳ ವಿವರ: ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಚಿಟಗುಪ್ಪಾ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮನ್ನಾಏಖೇಳ್ಳಿ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮುತ್ತಂಗಿ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಬೇಮಳಖೇಡಾ. ಡಾ||ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಚಿಟಗುಪ್ಪಾ.
ಆಸಕ್ತರು ಇಲಾಖೆಯ ವೆಬ್‌ಸೈಟ್ https://swdhmis.karnataka.gov.in/  ಮೂಲಕ ದಿನಾಂಕ: 31-08-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಿಂದಿನ ತರಗತಿಯಲ್ಲಿ ತೆರ್ಗಡೆಯಾದ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರಕಾರ್ಡ, ಬ್ಯಾಂಕ್ ಖಾತೆ ಸಂಖ್ಯೆ, ವಿದ್ಯಾರ್ಥಿ ಸ್ಯಾಟ್ಸ್ ಹಾಗೂ ಎಸ್.ಎಸ್.ಪಿ ವಿದ್ಯಾರ್ಥಿ ಐಡಿ ಸಂಖ್ಯೆಯೊAದಿಗೆ ಆನ್‌ಲೈನ್ ಅರ್ಜಿ ಭರ್ತಿ ಮಾಡಿ ಪ್ರಿಂಟ್ ಕಾಪಿ ಮತ್ತು ವಿದ್ಯಾರ್ಥಿಯ ಇತ್ತಿಚಿನ 4 ಭಾವ ಚಿತ್ರದೊಂದಿಗೆ ವಸತಿ ನಿಲಯ ಪಾಲಕರಿಗೆ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology