Home » ಲೈವ್ ನ್ಯೂಸ್ » ಹೊಸ ವರ್ಷಾಚರಣೆ ಸಾರ್ವತ್ರಿಕವಾಗಿ ಅನುಮತಿ ಸರ್ಕಾರದ ನಿಯಮ ಪ್ರಕಟಣೆ

ಹೊಸ ವರ್ಷಾಚರಣೆ ಸಾರ್ವತ್ರಿಕವಾಗಿ ಅನುಮತಿ ಸರ್ಕಾರದ ನಿಯಮ ಪ್ರಕಟಣೆ

ಬೆಂಗಳೂರು.29.ಡಿಸೆಂಬರ್.25: ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲಾಗಿದ್ದು, ಡಿಸೆಂಬರ್‌ 31ರ ರಾತ್ರಿ 1ರ ವರೆಗೆ ಸಾರ್ವತ್ರಿಕವಾಗಿ ಹೊಸ ವರ್ಷ ಆಚರಿಸಲು ಅನುಮತಿಯಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಹೊಸ ವರ್ಷದ ಆಚರಣೆಗೆ ನಾಲ್ಕು ದಿನಗಳಷ್ಟೇ ಬಾಕಿಯಿದ್ದು, ಬೆಂಗಳೂರು ನಗರದಾದ್ಯಂತ ಪೊಲೀಸ್‌ ಪಹರೆ ಹೆಚ್ಚಿಸಲಾಗಿದೆ. ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಆಗದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸೂಕ್ಷ್ಮ ಪ್ರದೇಶ ಮತ್ತು ಹೆಚ್ಚಿನ ಜನರು ಸೇರುವ ಪ್ರದೇಶಗಳಲ್ಲಿ ಹೆಚ್ಚುವರಿ ಸಿಸಿಟಿವಿ ಅಳವಡಿಕೆ ಕಾರ್ಯವು ಪ್ರಗತಿಯಲ್ಲಿದೆ.

ಹೊಸ ವರ್ಷದ ಆಚರಣೆಗೆ ನಾಲ್ಕು ದಿನಗಳಷ್ಟೇ ಬಾಕಿಯಿದ್ದು, ಬೆಂಗಳೂರು ನಗರದಾದ್ಯಂತ ಪೊಲೀಸ್‌ ಪಹರೆ ಹೆಚ್ಚಿಸಲಾಗಿದೆ.

ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಆಗದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶ ಮತ್ತು ಹೆಚ್ಚಿನ ಜನರು ಸೇರುವ ಪ್ರದೇಶಗಳಲ್ಲಿ ಹೆಚ್ಚುವರಿ ಸಿಸಿಟಿವಿ ಅಳವಡಿಕೆ ಕಾರ್ಯವು ಪ್ರಗತಿಯಲ್ಲಿದೆ ಎಂದು ತಿಳಿಸಿದೆ.

* ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಸೂಚನೆಗಳೇನು?

ಪಬ್, ಕ್ಲಬ್ ಹಾಗೂ ರೆಸ್ಟೋರೆಂಟ್‌ಗಳ ವ್ಯವಸ್ಥಾಪಕರು, ಸಿಬ್ಬಂದಿಗಳು ಮದ್ಯಪಾನ ಮಾಡಿರಬಾರದು.

ಪಟಾಕಿ ಸಿಡಿಸುವಂತಿಲ್ಲ.

ಕಾನೂನು ಬಾಹಿರ ಪಾರ್ಟಿಗಳಿಗೆ ಅವಕಾಶ ಇಲ್ಲ.

ಪ್ರಚೋದನಕಾರಿ ಹಾಡು ಹಾಕಬಾರದು.

ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು

* ಪಬ್ ಮಾಲೀಕರಿಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಸೂಚನೆಗಳೇನು?

ಸ್ಥಳದ ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ಪ್ರವೇಶ ಟಿಕೆಟ್ ಹಾಗೂ ಪಾಸ್ ವಿತರಿಸಬೇಕು.

ಅಪ್ರಾಪ್ತರಿಗೆ ಮದ್ಯ ಪೂರೈಸುವಂತಿಲ್ಲ

ತಪಾಸಣೆ ಬಿಗಿಗೊಳಿಸಬೇಕು

ಸಂಶಯಾಸ್ಪದ ವಸ್ತುಗಳು ಹಾಗೂ ವ್ಯಕ್ತಿಗಳು ಕ೦ಡುಬ೦ದರೆ ಪೊಲೀಸರಿಗೆ ಮಾಹಿತಿ ನೀಡಬೇಕು

ವಿದ್ಯುತ್ ಸಂಪರ್ಕ ಕಡಿತವಾದ ವೇಳೆ ಪರ್ಯಾಯ ವಿದ್ಯುತ್‌ ಸ೦ಪರ್ಕ ವ್ಯವಸ್ಥೆ ಹೊ೦ದಿರಬೇಕು ಎಂದು ಸೂಚಿಸಿದೆ.

Author

ಪ್ರಮುಖ ಸುದ್ದಿ

Stock market

Astrology