Home » ಲೈವ್ ನ್ಯೂಸ್ » 30 ಸಾವಿರ ವಿದ್ಯಾರ್ಥಿವೇತನಕೆ – ಅರ್ಜಿ ಅಹ್ವಾನ.

30 ಸಾವಿರ ವಿದ್ಯಾರ್ಥಿವೇತನಕೆ – ಅರ್ಜಿ ಅಹ್ವಾನ.

ಬೆಂಗಳೂರು.24.ಜನವರಿ.26: ರಾಜ್ಯಾದ್ಯಂತ ಗ್ರಾಮೀಣ ಭಾಗದ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ  ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣದ ಅವಕಾಶ ಕಲ್ಪಿಸುವ ಉದ್ದೇಶದಿಂದ ದೀಪಿಕಾ ವಿದ್ಯಾರ್ಥಿವೇತನ ಯೋಜನೆಯನ್ನು ಚಾಲನೆಯಲ್ಲಿ ತರಲಾಗಿದೆ.

ಈ ಯೋಜನೆಯಡಿ ಅರ್ಹ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000 ರೂ.ಸಹಾಯವನ್ನು ನೀಡಲಾಗುತ್ತದೆ. ಪದವಿ ಹಾಗೂ ಡಿಪ್ಲೊಮಾ ಕೋರ್ಸ್‌ಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿ ವೇತನ ಲಾಭ ಪಡೆಯಲು ಅರ್ಹ.

ಈ ವಿದ್ಯಾರ್ಥಿವೇತನ ಯೋಜನೆಯು ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ. 

ಜೊತೆಗೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ನ ಮೊದಲ ವರ್ಷಕ್ಕೆ ಪ್ರವೇಶ ಪಡೆದಿರಬೇಕು.

ದೀಪಿಕಾ ವಿದ್ಯಾರ್ಥಿವೇತನದಡಿ ಕೋರ್ಸ್ ಅವಧಿಯಂತೆ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30,000 ಹಣಕಾಸು ನೆರವು ನೀಡಲಾಗುತ್ತದೆ. ನಾಲ್ಕು ವರ್ಷದ ಪದವಿ ಕೋರ್ಸ್‌ನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಒಟ್ಟು 1.20 ಲಕ್ಷ ರೂ. ವರೆಗೆ ಸಹಾಯ ಲಭ್ಯವಾಗಲಿದೆ. ಈ ಹಣವನ್ನು ವಿದ್ಯಾರ್ಥಿನಿಯರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿನಿಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಆಧಾರ್ ಕಾರ್ಡ್, ಶೈಕ್ಷಣಿಕ ಪ್ರಮಾಣಪತ್ರಗಳು, ಕಾಲೇಜು ಪ್ರವೇಶ ದೃಢೀಕರಣ ಪತ್ರ, ಬ್ಯಾಂಕ್ ಪಾಸ್‌ಬುಕ್ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಪ್ರತಿವರ್ಷ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಉತ್ತೀರ್ಣರಾಗಿರುವುದು ಮುಂದಿನ ವರ್ಷದ ವಿದ್ಯಾರ್ಥಿವೇತನ ಪಡೆಯಲು ಅನಿವಾರ್ಯವಾಗಿದೆ.

ಈ ಯೋಜನೆಯ ಮೂಲಕ ರಾಜ್ಯದ ಸಾವಿರಾರು ವಿದ್ಯಾರ್ಥಿನಿಯರಿಗೆ ಶಿಕ್ಷಣದ ಕನಸನ್ನು ಮುಂದುವರಿಸಲು ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology