Home » ಲೈವ್ ನ್ಯೂಸ್ » ದೇಶದ ವಿವಿಧ ಭಾಗಗಳಲ್ಲಿ ಎರಡು ಸಾವಿರ ಚಾಲನಾ ತರಬೇತಿ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧಾರ

ದೇಶದ ವಿವಿಧ ಭಾಗಗಳಲ್ಲಿ ಎರಡು ಸಾವಿರ ಚಾಲನಾ ತರಬೇತಿ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧಾರ

ಹೊಸ ದೆಹಲಿ.17.ಜೂನ್.25:- ದೇಶದ ವಿವಿಧ ಭಾಗಗಳಲ್ಲಿ ಎರಡು ಸಾವಿರ ಚಾಲನಾ ತರಬೇತಿ ಶಾಲೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ದೇಶದ ಹಿಂದುಳಿದ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಈ ತರಬೇತಿ ಶಾಲೆಗಳನ್ನು ತೆರೆಯಲಾಗುವುದು, ಇದು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಹೇಳಿದರು.

ದೇಶದಲ್ಲಿ ಸುಮಾರು 22 ಲಕ್ಷ ಚಾಲಕರ ಕೊರತೆಯಿದೆ ಮತ್ತು ಈ ತರಬೇತಿ ಶಾಲೆಗಳು ಕೌಶಲ್ಯಪೂರ್ಣ ಚಾಲಕರ ಕೊರತೆಯನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ತಮ್ಮ ಸಚಿವಾಲಯ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಸಂಚಾರ ನಿಯಮಗಳನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿದೆ ಎಂದು ಶ್ರೀ ಗಡ್ಕರಿ ಹೇಳಿದರು.

Author

ಪ್ರಮುಖ ಸುದ್ದಿ

Stock market

Astrology