Home » ಲೈವ್ ನ್ಯೂಸ್ » ಬೀಜ ವಿತರಣೆ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀಜ ವಿತರಣೆ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.17.ಜೂನ್.25:- ಕಮಲನಗರ ತಾಲೂಕಿನ ಹೊಲಸಮುದ್ರ ಗ್ರಾಮದ ಬೀಜ ವಿತರಣೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈತರಿಗೆ ಬಿತ್ತನೆ ಬೀಜಗಳು ಸಮರ್ಪಕವಾಗಿ ನೀಡಲಾಗುತ್ತಿದೆ ಅಥವಾ ಇಲ್ಲವೇ ಎಂದು ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ರೈತರೊಂದಿಗೆ ಚರ್ಚಿಸಿ ಮುಂಗಾರು ಕೃಷಿ ಚಟುವಟಿಕೆಗಳಿಗೆ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಿಸಲು ತಿಳಿಸಲಾಗಿರುವುದರಿಂದ ರೈತರು ಯಾವುದೇ ಆತಂಕ ಪಡುವಂತಿಲ್ಲ ಎಂದು ತಿಳಿಸಿದರು.

Author

ಪ್ರಮುಖ ಸುದ್ದಿ

Stock market

Astrology