Home » ಲೈವ್ ನ್ಯೂಸ್ » ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರ ಕೊಪ್ಪಳ ಜಿಲ್ಲಾ ಪ್ರವಾಸ

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ.20.ಜೂನ್.25:- ಕರ್ನಾಟಕ ಸರ್ಕಾರದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಜೂನ್ 22 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.


ಅಧ್ಯಕ್ಷರು ಅಂದು ಬೆಳಗ್ಗೆ 8.30 ಗಂಟೆಗೆ ಹಳಿಯಾಳದಿಂದ ರಸ್ತೆ ಮೂಲಕ ಹೊರಟು, 11ಕ್ಕೆ ಕೊಪ್ಪಳ ಜಿಲ್ಲೆ ಕುಕನೂರು ನಿರೀಕ್ಷಣಾ ಮಂದಿರಕ್ಕೆ ಆಗಮಿಸಿ, ಸಾರ್ವಜನಿಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಭೇಟಿ ಮಾಡಲಿದ್ದಾರೆ.

ಅಲ್ಲಿಂದ 11.15ಕ್ಕೆ ನಿರ್ಗಮಿಸಿ, ನಂತರ 11.30ಕ್ಕೆ ಶಿರೂರ ಗ್ರಾಮದಲ್ಲಿ ದಿ. ಕೆ.ಹೆಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.45ಕ್ಕೆ ಕುಕನೂರು ನಿರೀಕ್ಷಣಾ ಮಂದಿರಕ್ಕೆ ಆಗಮಿಸಿ, ಬಳಿಕ ಅಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಗೆ ಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology