Home » ಲೈವ್ ನ್ಯೂಸ್ » ಔರಾದ| ಸರ್ಕಾರಿ ಪ್ರ.ದ್ ಕಾಲೇಜಿಗೆ ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಔರಾದ| ಸರ್ಕಾರಿ ಪ್ರ.ದ್ ಕಾಲೇಜಿಗೆ ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಬೀದರ.21.ಜೂನ್.25:- ಗುರುನಾನಕ್ ಪ್ರಥಮ ದರ್ಜೆ ಕಾಲೇಜು ಬೀದರ್ ನ ರಜತ ಮಹೋತ್ಸವದ ಅಂಗವಾಗಿ ಜಿಲ್ಲಾಮಟ್ಟದ ಅಂತರ ಕಾಲೇಜು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ದಿನಾಂಕ 13.6.2025 ಹಾಗೂ 14.6. 2025  ರಂದು ಹಮ್ಮಿಕೊಂಡಿರುತ್ತಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜು ಔರಾದನ  ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿರುತ್ತಾರೆ. ಕಾಲೇಜಿನ ವಿದ್ಯಾರ್ಥಿನಿಯರು ಖೋ ಖೋ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ ಥ್ರೋಬಾಲ್ ಕ್ರೀಡೆಯಲ್ಲಿಯೂ ಭಾಗವಹಿಸಿ ವಿಜೇತರಾಗಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಅಂತೆಯೇ  ಕಾಲೇಜಿನ ವಿದ್ಯಾರ್ಥಿಗಳು ಕೂಡ ಪುರುಷರ ಖೋ ಖೋ ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾಗಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಈ ಎಲ್ಲಾ ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದಕ್ಕಾಗಿ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲ್ಯಾಘಿಸುತ್ತ ಕಾಲೇಜಿನ ಪ್ರಾಂಶುಪಾಲರಾದಂತಹ ಶ್ರೀಮತಿ ಅಂಬಿಕಾದೇವಿ ಕೊತ್ಮಿರ್ ಅವರು ವಿದ್ಯಾರ್ಥಿಗಳಿಗೆ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದಂತಹ ಡಾ. ಊರ್ವಶಿ ಕೋಡ್ಲಿ ಅವರನ್ನು ಅಭಿನಂದಿಸುತ್ತಾ ಹರ್ಷ ವ್ಯಕ್ತಪಡಿಸಿರುತ್ತಾರೆ.

Author

ಪ್ರಮುಖ ಸುದ್ದಿ

Stock market

Astrology