Home » ಲೈವ್ ನ್ಯೂಸ್ » ಘೋಡಂಪಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ

ಘೋಡಂಪಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ ಬಿ.ಖಂಡ್ರೆ ಭೇಟಿ

ಬೀದರ.06.ಜುಲೈ.25:- ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರಿಂದು ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಚಿವರು ಕಾಲೇಜಿನ, ತರಗತಿ ಕೊಠಡಿಗಳು, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಅಧ್ಯಾಪಕರು ಹಾಗೂ ಸಿಬ್ಬಂದಿಗಳಿoದ ಮಾಹಿತಿ ಪಡೆದರು. ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ಅವರು ಅವರ ಅಭಿಪ್ರಾಯ, ಅಗತ್ಯವಿರುವ ಸೌಲಭ್ಯಗಳು ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಕನಸುಗಳ ಬಗ್ಗೆ ಹಂಚಿಕೊoಡಾಗ ಸಚಿವರು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.

Author

ಪ್ರಮುಖ ಸುದ್ದಿ

Stock market

Astrology