Home » ಲೈವ್ ನ್ಯೂಸ್ » ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.06.ಜುಲೈ.25:- ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಹಾಗೂ ಆ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು ಒದಗಿಸುವ ಕುರಿತು ಸ್ಥಳ ಗುರುತಿಸಿ ವಾರದೊಳಗೆ ಸರ್ವೆ ಮಾಡಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚನೆ ನೀಡಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಸಲಹಾ ಸಮಿತಿ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಒಬಿಸಿಯಲ್ಲಿ ಬರುವ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಜನರಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಸೇರಿದಂತೆ ವಿವಿಧ ಸೇವೆಗಳು ವಿಳಂಭವಾಗದAತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆಯಿಂದ ಜಿ+3 ಯೋಜನೆಯಲ್ಲಿ 65+25 ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಲಾಗುವುದು. ಔರಾದನಲ್ಲಿ 200 ಕುಟುಂಬಗಳಿಗೆ 2 ಎಕರೆ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಭೂಮಿ ಮಂಜೂರಾತಿ ಆಗಿದ್ದು ಕಡಿಮೆ ಬಿದ್ದಲ್ಲಿ ನಗರ ವ್ಯಾಪ್ತಿಯಲ್ಲಿ ಭೂಮಿ ಗುರುತಿಸುವಂತೆ ಔರಾದ ತಹಶೀಲ್ದಾರ್ ಅವರಿಗೆ ತಿಳಿಸಿದರು.
ಈ ಸಭೆಯಲ್ಲಿ ಬೀದರ ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್ ಜೈನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಸುನಿತಾ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Author

ಪ್ರಮುಖ ಸುದ್ದಿ

Stock market

Astrology